SAGARA | ಡೆಂಘೀ ಜ್ವರ ಶಂಕೆ 06 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ
ಜನ್ನತ್ ನಗರದ ಮಹಮ್ಮದ್ ನಯಾನ್ (05) ಮೃತ ಬಾಲಕ. ಕಳೆದ ಐದು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಈತನನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಚಿಕಿತ್ಸೆ ನೀಡಲಾಯಿತು.

ಶುಕ್ರವಾರ ಬಾಲಕನಿಗೆ ತೀವ್ರ ಜ್ವರ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಜ್ವರ, ವಾಂತಿ ಹೆಚ್ಚಾಗಿ ರಕ್ತದೊತ್ತಡ ಸಹ ಕಡಿಮೆ ಆಗಿತ್ತು ಎಂದು ತಿಳಿದುಬಂದಿದೆ.
ಚಿಂತಾಜನಕ ಸ್ಥಿತಿಯಲ್ಲಿದ್ದಾಗ ಶುಕ್ರವಾರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಅಯಾನ್ ಶನಿವಾರ ಬೆಳಗ್ಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
SORABA :ಮೀನು ಹಿಡಿಯಲು ಹೋದ ವ್ಯಕ್ತಿ ನಾಪತ್ತೆ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.