ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಅದ್ಧೂರಿ ಚಾಲನೆ

ಸಾಗರ: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಮಂಗಳವಾರ ಅದ್ಧೂರಿಯಾಗಿ ಚಾಲನೆ ದೊರಕಿತು.
ಒಂಬತ್ತು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಮೊದಲ ದಿನದ ಸಾಂಪ್ರಾದಾಯಿಕ ಪೂಜಾ ವಿಧಿ ವಿಧಾನಗಳು ಬೆಳಗ್ಗೆ ಬ್ರಾಹ್ಮೀ ಮಹೂರ್ತದಲ್ಲಿ ನಡೆಯಿತು. ಜಾತ್ರೆಯ ಮೊದಲ ದಿನವೇ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು.


ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ತಾಯಿ ಶ್ರೀ ಮಾರಿಕಾಂಬೆಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಲಾಯಿತು. ವಿಧಿವಿಧಾನಗಳನ್ನು ದೇವಾಲಯದ ಪ್ರಧಾನ ಅರ್ಚಕ ವಿದ್ವಾನ್ ಪಿ.ಎಲ್.ಗಜಾನನ ಭಟ್ ನೆರವೇರಿಸಿದರು. ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ನಂತರ ಸಂಪ್ರದಾಯದಂತೆ ಪುರೋಹಿತ ರಮೇಶ ಭಟ್ಟರ ಮನೆಯಲ್ಲಿ ಪೂಜಾ ಕಾರ್ಯಕ್ರಮ ನಡೆದವು.


ಶ್ರೀ ಮಹಾಗಣಪತಿ ದೇವಾಲಯದಿಂದ ಮಂಗಳವಾದ್ಯಗಳೊಂದಿಗೆ ಸಾಗರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಬಂದ ದೇವಿಯ ಆಭರಣಗಳನ್ನು ತವರುಮನೆಗೆ ತರಲಾಯಿತು. ಸಾಗರ ನಗರದ ತವರು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಅತ್ಯಾಕರ್ಷಕವಾದ ಶ್ರೀ ಮಾರಿಕಾಂಬಾ ವಿಗ್ರಹಕ್ಕೆ ವಿವಿಧ ಸಾಂಪ್ರಾದಾಯಿಕ ಆಚರಣೆಗಳನ್ನು ನಡೆಸಿ ಆಭರಣಗಳನ್ನು ತೊಡಿಸಲಾಯಿತು.


ಪೂಜಾ ಕಾರ್ಯಕ್ರಮದ ನಂತರ ತಾಯಿಯ ವಿಗ್ರಹಕ್ಕೆ ಭಾರಿ ಗಾತ್ರದ ಹಾರ ಸೇರಿದಂತೆ ವೈವಿಧ್ಯಮಯ ಹೂವಿನ ಅಲಂಕಾರ ನಡೆಸಿ ಮಹಾಮಂಗಳಾರತಿ ನಡೆಸಲಾಯಿತು. ನಂತರ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ತವರು ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕ ಮಧುಕರ್ ಭಟ್, ಪುರೋಹಿತ ರಮೇಶ್ ಭಟ್, ಗಜಾನನ ಜೋಯ್ಸ್, ನೀಲಕಂಠ ಜೋಯ್ಸ್, ಸದಾಶಿವ ಜೋಯ್ಸ್, ರಾಘವೇಂದ್ರ ಭಟ್, ನವೀನ್ ಜೋಯ್ಸ್, ಸುಧೀಂದ್ರ ಜೋಯ್ಸ್, ಲಕ್ಷ್ಮಣ್‌ಜೋಯ್ಸ್ ಇತರರು ಇದ್ದರು.
ಗಣಪತಿ ದೇವಸ್ಥಾನದಿಂದ ಮಾರಿಕಾಂಬಾ ದೇವಸ್ಥಾನದ ತವರು ಮನೆಯವರೆಗೂ ಮೆರವಣಿಗೆಯಲ್ಲಿ ಸಾಗರದ ದೈವಜ್ಞ ಮಹಿಳಾ ಸಮಾಜದ ಸದಸ್ಯರು ಚಂಡೆವಾದನ ನಡೆಸಿಕೊಟ್ಟರು.


ಮೊದಲ ದಿನ ಮಂಗಳವಾರ ತವರು ಮನೆಯಲ್ಲಿ ಪೂಜೆ ನಡೆಯಲಿದೆ. ಫೆ. 8ರಿಂದ ಶ್ರೀ ಮಾರಿಕಾಂಬಾ ದೇವಿಯ ಮೂರ್ತಿಯನ್ನು ಗಂಡನ ಮನೆ ಆವರಣದಲ್ಲಿ ಕೂರಿಸಲಾಗುತ್ತದೆ. ಫೆ. 15ರವರೆಗೂ ಗಂಡನ ಮನೆ ಆವರಣದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಉಡಿಸೇವೆ, ತುಲಾಭಾರ, ಸೇರಿದಂತೆ ಭಕ್ತರು ಹರಕೆ ಸಲ್ಲಿಸಲು ಜಾತ್ರಾ ಸಮಿತಿ ಪೂರಕ ವ್ಯವಸ್ಥೆ ಮಾಡಿದೆ.


ಒಂಬತ್ತು ದಿನಗಳ ವಿವಿಧ ಧಾರ್ಮಿಕ‌ ಕಾರ್ಯಕ್ರಮ ಹಾಗೂ ಪೂಜಾ ಕಾರ್ಯಗಳ ನಂತರ ಫೆ. 15 ರಂದು ರಾತ್ರಿ 10.30ಕ್ಕೆ ರಾಜಬೀದಿ ಉತ್ಸವ ನಡೆಯಲಿದೆ. ಶ್ರೀ ಮಾರಿಕಾಂಬಾ ದೇವಿಯನ್ನು ವನಕ್ಕೆ ಬಿಡಲಾಗುತ್ತದೆ. ರಾಜಬೀದಿ ಉತ್ಸವದಲ್ಲಿ ಪ್ರಸಿದ್ಧ ಜಾನಪದ ಕಲಾತಂಡಗಳು ಪಾಲ್ಗೊಳ್ಳಲಿವೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,755FollowersFollow
0SubscribersSubscribe
- Advertisement -spot_img

Latest Articles

error: Content is protected !!