ಸಾಗರ : ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿರುವ ಘಟನೆ ಗೌತಮಪುರ ಬಳಿ ನಡೆದಿದೆ.
ಮೃತ ಚಾಲಕನನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ.
ಗೌತಮಪುರದಿಂದ ಕೋಟೆಕೊಪ್ಪಕ್ಕೆ ಹೋಗುತ್ತಿದ್ದಾಗ ಈ ಅಪಘಾತವಾಗಿದೆ. ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಚಾಲಕ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ.
ಈ ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.