ಸಾಗರ: ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ಗೋಪಾಲ್ ಅವರ ಪುತ್ರ ಶರತ್ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಗರ ತಾಲೂಕಿನ ಆನಂದಪುರದ ಬಸವನ ಬೀದಿಯ ನಿವಾಸಿಯಾಗಿರುವ ಶರತ್ ಅವರು ಆನಂದಪುರ ಬಳಿಯ ತಾವರೆಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಶರತ್ ಸಾವಿಗೆ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ.
ತೋಟದ ಮನೆಯ ದೇವರ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಶವವನ್ನು ಆಸ್ಪತ್ರೆಗೆ ಒಯ್ಯಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.