ಶಿವಮೊಗ್ಗ

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ವೀಕ್ಷಣೆಗೆ ಮುಕ್ತ

ಸಕ್ರೆಬೈಲು ಆನೆ ಬಿಡಾರವು ಸೆಪ್ಟೆಂಬರ್ 26 ರಿಂದ ಮತ್ತೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ.

InShot 20260925 074300865
ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ವೀಕ್ಷಣೆಗೆ ಮುಕ್ತ Sakrebail

ಶಿವಮೊಗ್ಗ ; ಇಲ್ಲಿನ ಪ್ರಸಿದ್ಧ ಸಕ್ರೆಬೈಲು ಆನೆ ಬಿಡಾರವು ಸೆಪ್ಟೆಂಬರ್ 26 ರಿಂದ ಮತ್ತೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ.

WhatsApp Group Join Now
Telegram Group Join Now
Instagram Group Join Now

ಈ ಹಿಂದೆ ದುಬಾರೆ ಆನೆ ಶಿಬಿರದಲ್ಲಿ ನಡೆದ ಅಚಾತುರ್ಯದ ಘಟನೆಯಿಂದಾಗಿ, ಪ್ರವಾಸಿಗರ ಭದ್ರತೆಯ ಹಿತದೃಷ್ಟಿಯಿಂದ ರಾಜ್ಯದ ಎಲ್ಲ ಆನೆ ಶಿಬಿರಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಅರಣ್ಯ ಸಚಿವರು ಆದೇಶಿಸಿದ್ದರು. ಸೂಕ್ತ ಭದ್ರತಾ ನಿಯಮಾವಳಿಗಳನ್ನು ರೂಪಿಸಿದ ಬಳಿಕವಷ್ಟೇ ಆನೆ ಬಿಡಾರಗಳನ್ನು ತೆರೆಯಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಹಲವು ಸುರಕ್ಷತಾ ಬದಲಾವಣೆಗಳನ್ನು ತರಲಾಗಿದೆ.

ಪ್ರತ್ಯೇಕ ದಾರಿಗಳ ನಿರ್ಮಾಣ:

ಸಾರ್ವಜನಿಕರು ಮತ್ತು ಆನೆಗಳ ಸಂಚಾರಕ್ಕೆ ಪ್ರತ್ಯೇಕ ಮಾರ್ಗಗಳನ್ನು ಕಲ್ಪಿಸಲಾಗಿದ್ದು, ಪ್ರವಾಸಿಗರು ಆನೆಗಳ ನೇರ ಸಂಪರ್ಕಕ್ಕೆ ಬರದಂತೆ ತಡೆಯಲು ಭದ್ರತಾ ವ್ಯವಸ್ಥೆ ಮಾಡಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮಾಹಿತಿ ಫಲಕಗಳು:

ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಲು ಬಿಡಾರದಾದ್ಯಂತ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳು ಪೂರ್ಣಗೊಂಡಿರುವುದರಿಂದ, ಸೆಪ್ಟೆಂಬರ್ 26 ರಿಂದ ಸಾರ್ವಜನಿಕರಿಗೆ ಪ್ರವೇಶಾವಕಾಶ ನೀಡಲಾಗುತ್ತಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!