RIPPONPETE ; ಶಿವಮೊಗ್ಗ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಹುಂಚ ಗ್ರಾಪಂ ವ್ಯಾಪ್ತಿಯ ಸ.ಹಿ.ಪ್ರಾ. ಶಾಲೆ ಸಮಟಗಾರು ಶಿಕ್ಷಕಿ ಅಂಬಿಕಾ ಚಂದ್ರಶೇಖರ್ ಸ್ಥಳದಲ್ಲೇ ಪಾಠೋಪಕರಣ ತಯಾರಿಕಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಭಿನಂದನೆ :
ಇವರ ಸಾಧನೆಗೆ ಶಾಲಾ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ವಿದ್ಯಾರ್ಥಿ ವೃಂದ, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಅಭಿನಂದಿಸಿ ಶುಭ ಹಾರೈಸಿದ್ದಾರೆ.