Hosanagara

ಸಮಟಗಾರು ಶಾಲೆ ಶಿಕ್ಷಕಿ ರತ್ನಕುಮಾರಿ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ

InShot 20260821 211632135

ಹೊಸನಗರ : ಸೆಪ್ಟೆಂಬರ್‌ 5ರ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ಪ್ರಸಕ್ತ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ಪಟ್ಟಿಯನ್ನು (National Teachers Award List) ಪ್ರಕಟಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪೈಕಿ ಕರ್ನಾಟಕದಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ‌.ಪಂ. ವ್ಯಾಪ್ತಿಯ ಸಮಟಗಾರು ಶಿಕ್ಷಕಿ ಕೂಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ ಈ ವರ್ಷದ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ ಒಲಿದುಬಂದಿದೆ.

ಸೆಪ್ಟೆಂಬರ್ 5ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ಪ್ರಮಾಣಪತ್ರ, 50 ಸಾವಿರ ರೂ. ನಗದು ಹಾಗೂ ಬೆಳ್ಳಿಯ ಪದಕವನ್ನು ಒಳಗೊಂಡಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>