HOSANAGARA ; ಪಟ್ಟಣದ ಸಾರ್ವಜನಿಕಾ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕೆಬಿಸಿ ಕೃಷ್ಣಪ್ಪನವರ ಧರ್ಮಪತ್ನಿ ಸರಸ್ವತಿ ಕೃಷ್ಣಪ್ಪ (73) ಶುಕ್ರವಾರ ಬೆಳಗ್ಗೆ 11:30 ಸಮಯದಲ್ಲಿ ತೀವ್ರ ಹೃದಯಘಾತಕ್ಕೀಡಾಗಿ ಕೊನೆಯುಸಿರೆಳೆದರು.

ಮೃತರು ಪತಿ, ಇಬ್ಬರ ಪುತ್ರರು ಅಪಾರ ಬಂಧು-ಬಳಗ ಅಗಲಿದ್ದು ಶನಿವಾರ ಬೆಳಗ್ಗೆ ಅವರ ನಿವಾಸದ ಪಕ್ಕದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಸರಸ್ವತಿ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಪಾರ ಬಂಧು-ಬಳಗದವರು ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.