SORABA | ತಾಲೂಕಿನಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಾರ್ಭಟಕ್ಕೆ ಶಿವಮೊಗ್ಗ (Shivamogga) ಜಿಲ್ಲೆಯ ಆನವಟ್ಟಿ (Anavatti) ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ (School) ಗೋಡೆ ಮಂಗಳವಾರ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಿದ್ಯಾರ್ಥಿಗಳು ಪಾರಾಗಿದ್ದಾರೆ.
ಶಾಲೆಯಲ್ಲಿ 104 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಮಧ್ಯಾಹ್ನ ತರಗತಿ ಮುಗಿಸಿ ವಿದ್ಯಾರ್ಥಿಗಳಿಗೆ ವಿಶ್ರಾಂತಿ ನೀಡಲಾಗಿತ್ತು. ತರಗತಿಯಲ್ಲಿ 31 ವಿದ್ಯಾರ್ಥಿಗಳಿದ್ದರು. ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ನೀಡಿದ ವಿಶ್ರಾಂತಿ ಸಮಯದಲ್ಲಿ ಕೊಠಡಿ ಗೋಡೆ ಕುಸಿದಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಅನಾಹುತವಾಗಿಲ್ಲ.

ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಸ್ವಕ್ಷೇತ್ರ ಇದಾಗಿದ್ದು ಶಾಲೆ ಕಟ್ಟಡ ಶಿಥಿಲಾವ್ಯಸ್ಥೆಯಲ್ಲಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎಂಬುದು ಪೋಷಕರ ಆರೋಪವಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.