SHIVAMOGGA | School Holiday ಮುಂದುವರೆದ ಭಾರಿ ಮಳೆ ಹಿನ್ನೆಲೆಯಲ್ಲಿ ಸೊರಬ ಮತ್ತು ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ.
ಮಕ್ಕಳ ಸುರಕ್ಷತೆಯ ಹಿತದೃಷ್ಠಿಯಿಂದ ಅಂಗನವಾಡಿ ಕೇಂದ್ರಗಳು ಹಾಗೂ ಶಾಲಾ – ಕಾಲೇಜುಗಳಿಗೆ ಜು. 20 ರಂದು ಶನಿವಾರ ರಜೆ ಘೋಷಣೆ ಮಾಡಿರುವುದಾಗಿ ಸೊರಬ ತಹಶೀಲ್ದಾರ್ ಮಂಜುಳಾ ಹೆಗಡಾಳ್ ತಿಳಿಸಿದ್ದಾರೆ.

ಇನ್ನೂ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು ಶಾಲಾ ಮಕ್ಕಳ ಹಿತದೃಷ್ಟಿಯಿಂದ ಶನಿವಾರದಂದು ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಡಿಪ್ಲೊಮಾ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಚಂದ್ರಶೇಖರ ನಾಯಕ್ ಆದೇಶಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

