23.2 C
Shimoga
Sunday, November 27, 2022

SC, ST ಸಮುದಾಯಕ್ಕೆ ಬೊಮ್ಮಾಯಿ ಸರ್ಕಾರದಿಂದ ದೀಪಾವಳಿ ಕೊಡುಗೆ ; ದೀಪಕ್ ದೊಡ್ಡಯ್ಯ


ಚಿಕ್ಕಮಗಳೂರು: ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಅಂಕಿತ ಹಾಕಿದ್ದು, ರಾಜ್ಯದಾದ್ಯಂತ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದ ಜನರು ಸಂಭ್ರಮಿಸುವಂತೆ ಮಾಡಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ದೀಪಕ್ ದೊಡ್ಡಯ್ಯ ತಿಳಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ನ್ಯಾಯಮೂರ್ತಿ ನಾಹಮೋಹನದಾಸ ಅವರ ಶಿಫಾರಸ್ಸನ್ನು ಒಪ್ಪಿ ಅದನ್ನು ಜಾರಿಗೆ ತರಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿರುವುದರ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಈಗಾಗಲೇ ಮೀಸಲು ಹೆಚ್ಚಳ ಬಗ್ಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಿಲಾಗಿದೆ. ಅಕ್ಟೋಬರ್ 24ರಿಂದ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳವಾಗಿದೆ.

ಸದನದ ಕಲಾಪ ವೇಳೆಯಲ್ಲಿ ಸುಗ್ರೀವಾಜ್ಞೆಯನ್ನು ಉಭಯ ಸದನದಲ್ಲಿ ಮಂಡನೆ ಮಾಡಲಾಗುತ್ತದೆ ಮತ್ತು ವಿಧೇಯಕ ಬಗ್ಗೆ ಸದನದಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಿ ಬಳಿಕ ಸದನದಲ್ಲಿ ಬಿಲ್ ಪಾಸಾಗುತ್ತದೆ ಒಟ್ಟಿನಲ್ಲಿ ಸಾಕಷ್ಟು ವರ್ಷಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಸಮಸ್ಯೆಯನ್ನು ನಮ್ಮ ಬಿಜೆಪಿ ಸರ್ಕಾರ ಪರಿಹರಿಸಲಿದೆ ನಮ್ಮ ಸರ್ಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ದತೆಯಿದ ನಡೆದುಕೊಂಡಿದೆ. ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಿದೆ ಎಂದು ತಿಳಿಸಿದರು.

ರಿಷಿ ಸುನಕ್ ಪ್ರಧಾನಿ ; ಭಾರತೀಯರ ಪಾಲಿಗೆ ಐತಿಹಾಸಿಕ ವಿಜಯ
ಭಾರತವನ್ನು ಆಳಿದ್ದ ಬ್ರಿಟಿಷರ ಆಡಳಿತ ಇದೀಗ ಭಾರತೀಯನ ಕೈಗೆ ಸಿಕ್ಕಿದು ಇದು ಭಾರತೀಯರ ಪಾಲಿಗೆ ಐತಿಹಾಸಿಕ ವಿಜಯವಾಗಿದೆ ಎಂದು ದೀಪಕ್ ದೊಡ್ಡಯ್ಯ ತಿಳಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ಬ್ರಿಟಿಷರು ಅಧಿಕೃತವಾಗಿ ಸುಮಾರು 89 ವರ್ಷಗಳ ಕಾಲ ಭಾರತವನ್ನು ಆಳಿ, ಭಾರತದಲ್ಲಿನ ಅಪಾರವಾದ ಸಂಪತ್ತನ್ನು ಕೊಳ್ಳೆಹೊಡೆದುಕೊಂಡು ಹೋಗಿದ್ದರು ಆದರೆ ಇದೀಗ ಬ್ರಿಟಿಷರನ್ನೇ ಅಳಲು ನಮ್ಮ ಹೆಮ್ಮೆಯ ಕನ್ನಡಿಗ ಇನ್ಫೋಸಿಸ್ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್ ಪ್ರಧಾನಿಯಾಗಿ ಆಯ್ಕೆ ಆಗಿರುವುದು ಇಡೀ ದೇಶವೇ ಹೆಮ್ಮೆ ಪಡುವಂತಹ ವಿಚಾರವಾಗಿದೆ. ಇದು ಭಾರತೀಯರ ತಾಕತ್ತು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.


ದೀಪಾವಳಿ ದಿನವೇ ಭಾರತೀಯರೆಲ್ಲರೂ ಹೆಮ್ಮೆ ಪಡುವ ಸುದ್ದಿ ಹೊರಬಿದ್ದಿದೆ. ಇದೇ ಮೊದಲ ಬಾರಿಗೆ ಭಾರತ ಮೂಲದ ಪ್ರಜೆಯೊಬ್ಬರು 193 ಸಂಸದರ ಬಲದೊಂದಿಗೆ ಬ್ರಿಟನ್‌ನ ಪ್ರಧಾನ ಮಂತ್ರಿ ಸ್ಥಾನಕ್ಕೇರಿರುವುದು ಸಂತಸದ ವಿಷಯವಾಗಿದೆ.
ರಿಷಿ ಸುನಕ್ ಈಗಾಗಲೇ 5 ಬಾರಿ ಬ್ರಿಟನ್ ನ ಸಂಸದರಾಗಿ ಆಯ್ಕೆಯಾಗಿದ್ದು ಜೊತೆಗೆ ಸಚಿವರಾಗಿ ಕಾರ್ಯನಿರ್ವಹಿಸಿರುವ ಅನುಭವವಿದ್ದು ಪ್ರಧಾನಿ ಹುದ್ದೆಯನ್ನು ಸಮರ್ಥ ನಿಭಾಯಿಸುತ್ತಾರೆ ಎಂಬ ವಿಶ್ವಾಸ ಕೂಡ ನನಗಿದೆ, ಜೊತೆಗೆ ರಿಷಿ ಒಬ್ಬ ಸಮರ್ಥ ಆಡಳಿತಗಾರನಾಗಿದ್ದು ಅವರು ಬ್ರಿಟನ್ ಪ್ರಧಾನಿಯಾಗಿ ಆಯ್ಕೆ ಆಗಿರುವುದರಿಂದ ಭಾರತಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!