ಸಾಗರ

ಸಾಗರ ತಾಲೂಕಿನ ಶಾಲೆ, ಕಾಲೇಜುಗಳಿಗೂ ಬುಧವಾರ ರಜೆ ಘೋಷಣೆ

SAGARA | ತಾಲೂಕಿನಾದ್ಯಂತ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜು.31 ಬುಧವಾರ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ನಾಳೆಯೂ ಸಹ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ತಾಲ್ಲೂಕಿನಾದ್ಯಂತ ಎಲ್ಲಾ ಅಂಗನವಾಡಿಗಳು, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು. 31 ರಂದು ರಜೆ ಘೋಷಿಸಲಾಗಿದೆ. ಈ ದಿನದಂದು ನೀಡಿದ ರಜೆಯನ್ನು ಮುಂದಿನ ದಿನದಲ್ಲಿ ಹೊಂದಾಣಿಕೆ ಮಾಡಿ ಮಕ್ಕಳಿಗೆ ಪಾಠ ಪ್ರವಚನ ಮಾಡಲು ಸೂಚಿಸಲಾಗಿದೆ ಎಂದು ತಹಶೀಲ್ದಾರ್‌ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ.

ಇನ್ನೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಾದ್ಯಂತ ಈಗಾಗಲೇ ಶಾಲೆ, ಕಾಲೇಜುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್‌ ರಜೆ ಘೋಷಣೆ ಮಾಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

read more

School Holiday | ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ

School Holiday | ನಾಳೆಯೂ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]