ಚಿಕ್ಕಮಗಳೂರು ತಾಲೂಕು ಸುದ್ದಿ ಚಿಕ್ಕಮಗಳೂರು

School Holiday | ನಾಳೆಯೂ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

CHIKKAMAGALURU | ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಜು.31ರ ಬುಧವಾರ ಮಲೆನಾಡಿನ ಆರು ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

School Holiday | ನಾಳೆಯೂ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಕೊಪ್ಪ, ಕಳಸ, ಮೂಡಿಗೆರೆ, ಚಿಕ್ಕಮಗಳೂರು, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲ್ಲೂಕಿನ ಶಿಶುಪಾಲನಾ ಕೇಂದ್ರ, ಅಂಗನವಾಡಿ, ಶಾಲೆಗಳು, ಪಿಯು, ಪದವಿ ಮತ್ತು ಎಲ್ಲಾ ರೀತಿಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶದಲ್ಲಿ ತಿಳಿಸಿದ್ದಾರೆ.

Leave a Comment