HOSANAGARA | ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜು.31ರ ಬುಧವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲ್ಲೂಕಿನಾದ್ಯಂತ ಜು. 31ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ. ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶಿಸಿದೆ ಎಂದು ತಹಶೀಲ್ದಾರ್ ರಶ್ಮಿ ತಿಳಿಸಿದ್ದಾರೆ.
ಇನ್ನೂ ಈಗಾಗಲೇ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.


ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.