Chikkamagaluru

School Holiday | ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ !

CHIKKAMAGALURU | ಜಿಲ್ಲೆಯಾದ್ಯಂತ ಬಿರುಗಾಳಿಯೊಂದಿಗೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ – ಪ್ರೌಢ ಶಾಲೆಗಳಿಗೆ ಜು.26ರ ಶುಕ್ರವಾರ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಳೆ ಪ್ರಮಾಣ ಕಡಿಮೆ ಇದ್ದರು ಜಿಲ್ಲೆಯಾದ್ಯಂತ ಭಾರೀ ಗಾಳಿ ಬೀಸುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>