HOSANAGARA | ತಾಲೂಕಿನಾದ್ಯಂತ ನಿನ್ನೆಯಿಂದ ಭಾರಿ ಮಳೆ ಮುಂದುವರಿದಿದ್ದು ಇಂದು ಬೆಳಗ್ಗೆಯಿಂದಲೇ ಮಳೆ ಧೋ ಅಂತ ಸುರಿಯಲಾರಂಭಿಸಿದ್ದು ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ತಾಲೂಕು ಆಡಳಿತ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿದೆ.

ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಜು.16 ಮಂಗಳವಾರ ರಜೆ ನೀಡಲಾಗಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.