ಹೊಸನಗರ

School Holiday | ಶನಿವಾರವೂ ಹೊಸನಗರ ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ

HOSANAGARA | ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಜು. 27 ಶನಿವಾರವೂ ಸಹ ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಹೊಸನಗರ ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಜು‌. 27 ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಹಶೀಲ್ದಾರ್‌ ರಶ್ಮಿ ಹಾಲೇಶ್ ತಿಳಿಸಿದ್ದಾರೆ.

ಇಂದು ಸಹ ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಮಳೆ ಮುಂದುವರೆದ ಹಿನ್ನೆಲೆಯಲ್ಲಿ ರಜೆ ವಿಸ್ತರಣೆ ಮಾಡಲಾಗಿದೆ.

Read more

ಅತಿವೃಷ್ಠಿಯಿಂದ ಹಾನಿ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಸರ್ಕಾರ ಬದ್ಧ ; ಕಲಗೋಡು ರತ್ನಾಕರ

ಚಂದ್ರಗುತ್ತಿ ದೇಗುಲ ಅಭಿವೃದ್ಧಿಗೆ ಶೀಘ್ರ ಕ್ರಮ ; ಡಿಸಿ ಗುರುದತ್ತ ಹೆಗಡೆ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!