CHIKKAMAGALURU |School Holidays ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ (Heavy Rain) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೂಡಿಗೆರೆ ಮತ್ತು ಕಳಸ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ (Schools) ಇಂದು ರಜೆ ಘೋಷಿಸಲಾಗಿದೆ.
ಭಾರೀ ಗಾಳಿಯೊಂದಿಗೆ ಬಿಟ್ಟು-ಬಿಡದೆ ಸುರಿಯುತ್ತಿರುವ ಮಳೆಯಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮೂಡಿಗೆರೆ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಿ ತಹಶೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ. ಪಿಯುಸಿ ಹಾಗೂ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ತಿಳಿಸಿದ್ದಾರೆ.
ಇನ್ನು ಕಳಸ ತಾಲೂಕಿನಾದ್ಯಂತ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.
ತಡವಾಗಿ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ನಂತರ ವಾಪಸ್ಸಾದರು.
Read More :ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಭಾರಿ ವರ್ಷಧಾರೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.