School Holidays | ಮುಂದುವರೆದ ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ – ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ

Written by Mahesha Hindlemane

Published on:

SHIVAMOGGA | ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ-ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಸೊರಬ ತಾಲ್ಲೂಕಿನ ಅಂಗನವಾಡಿಗಳು ಸೇರಿದಂತೆ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

School Holidays |  ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಗುರುವಾರವೂ ರಜೆ

ಸಾಗರ :

ಸಾಗರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ಚಂದ್ರಶೇಖರ ನಾಯಕ್ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಾಗರ ತಹಶೀಲ್ದಾರ್‌ ಚಂದ್ರಶೇಖರ್‌ ನಾಯಕ್‌, ಮಕ್ಕಳ ಹಿತದೃಷ್ಟಿಯಿಂದ ಜುಲೈ 18ರಂದು ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೊರಬ :

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೊರಬ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಿ ಗ್ರೇಡ್‌ 2 ತಹಶೀಲ್ದಾರ್‌ ಆದೇಶ ಹೊರಡಿಸಿದ್ದಾರೆ.

ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ಜು.18ರಂದು ತಾಲೂಕಿನ ಎಲ್ಲಾ ಅಂಗನವಾಡಿಗಳು ಸೇರಿದಂತೆ, ಶಾಲಾ-ಕಾಲೇಜುಗಳಿಗೆ (ಪಿಯು ಕಾಲೇಜುಗಳಿಗೆ ಮಾತ್ರ) ರಜೆ ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹೊಸನಗರ :

ತಾಲೂಕಿನಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ತಾಲೂಕಿನ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜು ಮತ್ತು ಅಂಗನವಾಡಿಗಳಿಗೆ ಜು.18 ಗುರುವಾರದಂದು ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

ತೀರ್ಥಹಳ್ಳಿ :

ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣಗೌಡರ್ ಆದೇಶ ಹೊರಡಿಸಿದ್ದಾರೆ.

Leave a Comment