HOSANAGARA ; ಶಾಲಾ ಪ್ರವಾಸ ಹೊರಟಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು 29 ಜನರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಡಳ್ಳಿ ಸಮೀಪ ನರ್ತಿಗೆ ಬಳಿ ಸೋಮವಾರ ನಡೆದಿದೆ.
ಚಾಮರಾಜನಗರ ಆಳಂದೂರು ಖಾಸಗಿ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣ ಎರಡು ಆಂಬುಲೆನ್ ಗಳ ಮೂಲಕ ನಗರ ಆಸ್ಪತ್ರೆಗೆ ಸಾಗಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೊಸನಗರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಇನ್ನೂ ಚಾಮರಾಜನಗರ ಜಿಲ್ಲೆಯ ಮಸಣಪುರದ ಬಸ್ ಚಾಲಕ ಸುರೇಶ್ (50) ರವರ ತಲೆಗೆ ಗಂಭೀರ ಗಾಯಗಳಾಗಿದ್ದು, ದೇಶವಳ್ಳಿ ಗ್ರಾಮದ ಶಿಕ್ಷಕಿ ನಂದಿನಿ (35), ಮಳಂದೂರು ಪಟ್ಟಣದ ನೀಲಾಂಬರಿ (28) ಹಾಗೂ ಶಶಿಕಲಾ (35) ರವರಿಗೆ ಗಂಭೀರ ಗಾಯಗಳಾಗಿದ್ದು ಇವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.