ಹೊಸನಗರ

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆಯೂ ರಜೆ !

ಹೊಸನಗರ ; ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜು.5 ಶನಿವಾರ) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.05 ರ ಶನಿವಾರ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>