ಸಾಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.26) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ.

ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಜು. 26ರ ಶನಿವಾರ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

