ರಿಪ್ಪನ್‌ಪೇಟೆ ; ವಿಜ್ಞಾನ ನಮ್ಮ ನಿತ್ಯ ಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂತಹ ವೈಜ್ಞಾನಿಕ ವಸ್ತು ಪ್ರದರ್ಶನಗಳಿಂದ ವಿದ್ಯಾರ್ಥಿಗಳಲ್ಲಿ ಕುತೂಹಲ, ಪ್ರಶ್ನಿಸುವ ಮನೋಭಾವನೆ ಹಾಗೂ ವೈಜ್ಞಾನಿಕ ಮನೋಭಾವನೆಯನ್ನು ಉದ್ದೀಪನಗೊಳಿಸಲು ಸಾಧ್ಯವೆಂದು ಉಪಪ್ರಾಚಾರ್ಯ ರತ್ನಾಕರ ಕೆಸವಿನಮನೆ ಹೇಳಿದರು.
ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊಸನಗರ ಕ್ಷೇತ್ರ ಶಿಕ್ಷಣ ಇಲಾಖೆಯವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಶಾಲಾ ಹಂತದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಪ್ಪ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು. ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೇರಿಮಾತಾ, ಶ್ರೀಬಸವೇಶ್ವರ, ಉರ್ದು ಸರ್ಕಾರಿ ಶಾಲೆ, ವಿನಾಯಕ ನಗರ ಸರ್ಕಾರಿ ಸೇರಿದಂತೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಶಾಲೆಗಳ 500 ಕ್ಕೂ ಅಧಿಕ ವಿದ್ಯಾರ್ಥಿಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ವಿವಿಧ ಮಾದರಿಗಳನ್ನು ವೀಕ್ಷಿಸಿದರು.
ಎಸ್.ಡಿ.ಎಂ.ಸಿ. ಸದಸ್ಯರು ಮತ್ತು ಪೋಷಕ ವರ್ಗ ಹಾಗೂ ಪ್ರೌಢಶಾಲೆಯ ಶಿಕ್ಷಕ ವೃಂದ ಹಾಜರಿದ್ದರು.
ಶಿಕ್ಷಕ ಚಂದ್ರಕಾಂತ್ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕ ರಾಮಕೃಷ್ಣ ನಿರೂಪಿಸಿದರು. ಸೈಯದ್ ನೂರ್ ಆಹ್ಮದ್ ವಂದಿಸಿದರು.