ರಿಪ್ಪನ್‌ಪೇಟೆ ; ಜೈನ ಮಠದ ಶ್ರೀ ಹೊಂಬುಜ ಪದ್ಮಾವತಿ ಎಜುಕೇಷನಲ್ ಟ್ರಸ್ಟ್‌ನ ವತಿಯಿಂದ ನಡೆಯುತ್ತಿರುವ ಪರಂಜ್ಯೋತಿ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಶುಕ್ರವಾರದಂದು ವಿಜ್ಞಾನ ಮೇಳವನ್ನು ಆಯೋಜಿಸಲಾಗಿತ್ತು.

ಮೇಳದಲ್ಲಿ ಶಾಲಾ ಮಕ್ಕಳು ರಚಿಸಿದ ಪ್ರಯೋಗಗಳನ್ನು ಪ್ರದರ್ಶನದಲ್ಲಿ ಇಡಲಾಗಿತ್ತು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಿ. ಮಂಜಪ್ಪ, ಶಾಲಾ ಶಿಕ್ಷಕಿಯರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.