ರಿಪ್ಪನ್ಪೇಟೆ ; ಗರ್ತಿಕೆರೆಯ ಅವುಕ ಸರ್ಕಲ್ ಬಳಿ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳುವನ್ನು ಶಂಕರಹಳ್ಳಿ ಗ್ರಾಮದ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ. ತಡರಾತ್ರಿ ಅವುಕ ಸರ್ಕಲ್ ಬಳಿ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಭಾಸ್ಕರ್ ಶೆಟ್ಟಿಗೆ ರಸ್ತೆ ದಾಟುತ್ತಿದ್ದ ಎಮ್ಮೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ವೇಳೆ ಭಾಸ್ಕರ್ ಶೆಟ್ಟಿ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ ಎನ್ನಲಾಗಿದೆ.
ಗಾಯಾಳುವಿಗೆ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





