Ripponpete

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ; ರಿಪ್ಪನ್‌ಪೇಟೆ ಕೇಂದ್ರಕ್ಕೆ 267 ವಿದ್ಯಾರ್ಥಿಗಳು

ರಿಪ್ಪನ್‌ಪೇಟೆ ; ನಾಳೆಯಿಂದ (ಫೆ.28) ಆರಂಭವಾಗುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಗೆ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ 267 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದು ಪರೀಕ್ಷೆಗೆ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಪರೀಕ್ಷಾ ಮುಖ್ಯ ಅಧೀಕ್ಷಕ ಆರ್.ಅರುಣ್‌ಕುಮಾರ್ ಮಾಹಿತಿ ನೀಡಿದರು.

WhatsApp Group Join Now
Telegram Group Join Now
Instagram Group Join Now

ಕಾಲೇಜ್‌ನಲ್ಲಿ ನಡೆದ ಪೂರ್ವಭಾವಿ ತರಬೇತಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶನಿವಾರದಿಂದ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭಗೊಂಡು ಮಾರ್ಚ್ 16 ರವರೆಗೆ ನಡೆಯಲಿದ್ದು ಈಗಾಗಲೇ ಪರೀಕ್ಷಾ ಸಿದ್ದತೆಗಾಗಿ 9 ಕೊಠಡಿಗಳಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್ ನಂಬರ್ ಬರೆಯಲಾಗಿದೆ. ಅಲ್ಲದೆ, ಸಿಸಿ ಕ್ಯಾಮೆರಾಗಳನ್ನು ಎಲ್ಲಾ ಕೊಠಡಿಗಳಿಗೂ ಅಳವಡಿಸಲಾಗಿದೆ.

ಪರೀಕ್ಷಾ ಕೇಂದ್ರದ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಮಾಡಿಕೊಳ್ಳಲಾಗುವುದೆಂದು ತಿಳಿಸಿದ ಅವರು, ಪರೀಕ್ಷಾ ಕೇಂದ್ರದ ಸುತ್ತಮುತ್ತ ಸಾರ್ವಜನಿಕರುಗಳಿಗೆ ಅನಾವಶ್ಯಕವಾಗಿ ಓಡಾಡದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಕಾಲೇಜ್ ಪ್ರಾಚಾರ್ಯ ಕೃಷ್ಣಮೂರ್ತಿ, ಉಪನ್ಯಾಸಕರು ಸಿಬ್ಬಂದಿವರ್ಗ ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]