HOSANAGARA ; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಭದ್ರಾವತಿಯಲ್ಲಿ ನಡೆಸಿದ ಜಿಲ್ಲಾ ಮಟ್ಟದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಇಲ್ಲಿನ ಹೋಲಿ ರೆಡಿಮರ್ ಶಾಲೆಯ ವಿದ್ಯಾರ್ಥಿನಿ ಸಹನಾ ಗೋನ್ಸಾಲಿಸ್ ಹಾಗೂ 9ನೇ ತರಗತಿ ವಿದ್ಯಾರ್ಥಿನಿ ಅನನ್ಯ ವೆಂಕಟೇಶ್‌ರವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಭಿನಂದನೆ :
ಈ ವಿದ್ಯಾರ್ಥಿಗಳ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಈ ಶಾಲೆಯ ಪ್ರಾಂಶುಪಾಲರಾದ ವಿಲ್ಮಾ ಪಿಂಟೂ, ದೈಹಿಕ ಶಿಕ್ಷಕರಾದ ಕಮಲಾಕರ, ಧನಂಜಯ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ವಿಭಾಗ ಮಟ್ಟದಲ್ಲೂ ಜಯಶಾಲಿಯಾಗಿ ಬರಲಿ ಎಂದು ಹಾರೈಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.