ಹೊಸನಗರ

ಯೋಗಾಸನ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

HOSANAGARA ; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಭದ್ರಾವತಿಯಲ್ಲಿ ನಡೆಸಿದ ಜಿಲ್ಲಾ ಮಟ್ಟದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಇಲ್ಲಿನ ಹೋಲಿ ರೆಡಿಮರ್ ಶಾಲೆಯ ವಿದ್ಯಾರ್ಥಿನಿ ಸಹನಾ ಗೋನ್ಸಾಲಿಸ್ ಹಾಗೂ 9ನೇ ತರಗತಿ ವಿದ್ಯಾರ್ಥಿನಿ ಅನನ್ಯ ವೆಂಕಟೇಶ್‌ರವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅಭಿನಂದನೆ :

ಈ ವಿದ್ಯಾರ್ಥಿಗಳ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಈ ಶಾಲೆಯ ಪ್ರಾಂಶುಪಾಲರಾದ ವಿಲ್ಮಾ ಪಿಂಟೂ, ದೈಹಿಕ ಶಿಕ್ಷಕರಾದ ಕಮಲಾಕರ, ಧನಂಜಯ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ವಿಭಾಗ ಮಟ್ಟದಲ್ಲೂ ಜಯಶಾಲಿಯಾಗಿ ಬರಲಿ ಎಂದು ಹಾರೈಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]