HOSANAGARA | ತಾಲ್ಲೂಕಿನ ಮಸಗಲ್ಲಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು||ಸಂಜನಾರವರು ಪ್ರೌಢ ಶಾಲಾ ವಿಭಾಗ ಮಟ್ಟದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಸಿದ ಬಾಪೂಜಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ವಿಷಯದ ಕುರಿತಾದ ಪ್ರಬಂಧ ಸ್ವರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕೃಷ್ಣಮೂರ್ತಿ ಹಾಗೂ ಪೂರ್ಣಿಮಾ ದಂಪತಿಗಳ ಪುತ್ರಿಯಾಗಿದ್ದು ಇವರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಹಾಗೂ ನಗದು 3 ಸಾವಿರ ರೂ.ಗಳನ್ನು ನೀಡಿ ಗೌರವಿಸಲಾಗಿದ್ದು ಇವರು ರಾಜ್ಯ ಮಟ್ಟದಲ್ಲಿಯು ಪ್ರಥಮ ಸ್ಥಾನ ಪಡೆದು ಹೊಸನಗರ ತಾಲ್ಲೂಕಿಗೆ ಕೀರ್ತಿ ತರಲೆಂದು ಹೊಸನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಸಮನ್ವಯಾಧಿಕಾರಿ ಎಂ ರಂಗನಾಥ್, ಶಾಲೆಯ ಮುಖ್ಯ ಶಿಕ್ಷಕರಾದ ಪರಶುರಾಮಪ್ಪ, ಈ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ, ಸದಸ್ಯರುಗಳು ಶುಭ ಹಾರೈಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.