HOSANAGARA ; ಪಟ್ಟಣದ ಗುರೂಜಿ ಶಾಲೆಯ ವಿದ್ಯಾರ್ಥಿನಿ ಹಂಪಿಕಾ ಶಾರದ ಕರಾಟೆಯಲ್ಲಿ (17 ವರ್ಷ ವಯೋಮಿತಿಯ ಒಳಗೆ) ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆಗೆ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಭಿನಂದನೆ :
ಇವರ ಈ ಸಾಧನೆಗೆ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷರಾದ ಸುದೇಶ್‌ಕಾಮತ್, ಕಾರ್ಯದರ್ಶಿ ಶಾಂತಮೂರ್ತಿ ಹಾಗೂ ಎಲ್ಲ ಶಿಕ್ಷಕ ವೃಂದ ಆಡಳಿತ ಮಂಡಳಿಯ ನಿರ್ದೆಶಕರ ಸದಸ್ಯರು ಅಭಿನಂದಿಸಿ ರಾಜ್ಯ ಮಟ್ಟದಲ್ಲಿಯೂ ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿಲಿ ಎಂದು ಹಾರೈಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.