SHIVAMOGGA | ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ (69) ಹೃದಯಾಘಾತದಿಂದ ನಿಧನ ಹೊಂದಿದರು.
ತೈಲ ಬೆಲೆ ಏರಿಕೆ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್, ಪ್ರತಿಭಟನೆಯನ್ನುದ್ದೇಶಿಸಿ ಭಾಷಣ ಮಾಡಿದ್ದರು. ಬಳಿಕ ಪ್ರತಿಭಟನೆ ಮುಗಿದು ಎಲ್ಲರೂ ಹೊರಡುವ ವೇಳೆ, ತಲೆ ಸುತ್ತು ಬಂದು ಬಿದ್ದಿದ್ದು, ತಕ್ಷಣವೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಯಲ್ಲಿ ವೈದ್ಯರು ಹೃದಯಾಘಾತವಾಗಿದೆ ಎಂದು ತಿಳಿಸಿದ್ದು, ಪ್ರಥಮ ಚಿಕಿತ್ಸೆ ನೀಡಿದರು ಬದುಕುಳಿಯಲಿಲ್ಲ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿವಮೊಗ್ಗದಲ್ಲಿಂದು ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ವಿಭಿನ್ನ ರೀತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣದ ಮಾಡಿದ ಬಳಿಕ ಭಾನುಪ್ರಕಾಶ್ ಮನೆಗೆ ಹೊರಟಿದ್ದರು. ಈ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ದರೂ ಕೂಡ ಬದುಕುಳಿಯಲಿಲ್ಲ.
2009 ರಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಅವರು, 2013-19 ರವರೆಗೆ ಎಂಎಲ್ ಸಿಯಾಗಿದ್ದರು. ಪಕ್ಷ ಸಂಘಟನೆಯಲ್ಲಿ ಅವರ ಕೊಡುಗೆ ಅಪಾರವಿದ್ದು, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.
ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾಗ ಬಿಜೆಪಿಯಿಂದ ಅವರಿಗೆ ಎದುರಾಳಿಯಾಗಿ ಸ್ಪರ್ಧೆ ಮಾಡಿದ್ದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಟ್ಟಾ ಅನುಯಾಯಿಯಾಗಿದ್ದ ಭಾನುಪ್ರಕಾಶ್, ತಮ್ಮ ಮಾತುಗಾರಿಕೆ, ಸರಳತೆಯಿಂದಲೇ ಗುರುತಿಸಿಕೊಂಡವರು.
Ripponpete ಅಕ್ರಮವಾಗಿ ಜಾನುವಾರು ಸಾಗಾಟ, ವಾಹನ ಸಮೇತ ಮೂವರ ಆರೋಪಿಗಳ ಬಂಧನ