ಹೊಸನಗರ

34 ವರ್ಷಗಳ ಸುದೀರ್ಘ ಸೇವೆ ಬಳಿಕ ಕನ್ನಡ ಹಿರಿಯ ಉಪನ್ಯಾಸಕಿ ಗೋಪಿಕಾ ನಿವೃತ್ತಿ

34 ವರ್ಷಗಳ ಸುದೀರ್ಘ ಸೇವೆ ಬಳಿಕ ಕನ್ನಡ ಹಿರಿಯ ಉಪನ್ಯಾಸಕಿ ಗೋಪಿಕಾ ನಿವೃತ್ತಿ – InShot 20260801 222703316

ರಿಪ್ಪನ್‌ಪೇಟೆ : ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಹಿರಿಯ ಉಪನ್ಯಾಸಕಿ ಗೋಪಿಕಾ 34 ವರ್ಷಗಳ ಸುದೀರ್ಘ ಸೇವೆ ಪೂರ್ಣಗೊಳಿಸಿ ಶುಕ್ರವಾರ ನಿವೃತ್ತರಾದರು. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

WhatsApp Group Join Now
Telegram Group Join Now
Instagram Group Join Now

ಕಾಲೇಜಿನ ಪ್ರಾಚಾರ್ಯ ಕೃಷ್ಣಮೂರ್ತಿ ಮಾತನಾಡಿ, ಗೋಪಿಕಾ ಅವರು ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುವುದರ ಜೊತೆಗೆ ಶಿಸ್ತು, ಸಂಸ್ಕಾರ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಉತ್ತಮ ದಾರಿದೀಪರಾಗಿದ್ದಾರೆ ಎಂದು ಶ್ಲಾಘಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಿ.ಆರ್. ಗೋಪಾಲಕೃಷ್ಣ ಮಾತನಾಡಿ, ಗೋಪಿಕಾ ಅವರ ಬದ್ಧತೆ, ಸರಳ ವ್ಯಕ್ತಿತ್ವ ಹಾಗೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯು ಎಲ್ಲರಿಗೂ ಮಾದರಿಯಾಗಿದೆ. ಅವರ ಸೇವೆಯನ್ನು ಕಾಲೇಜು ಸದಾ ಗೌರವದಿಂದ ಸ್ಮರಿಸಲಿದೆ ಎಂದು ಹೇಳಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಲೇಖನ ಜಿ. ನಾಯ್ಕ್ ಹಾಗೂ ಕೆ. ಕಟ್ಟೆ ನಾಗಪ್ಪ ಸೇರಿದಂತೆ ಉಪನ್ಯಾಸಕರು ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಗೋಪಿಕಾ ಅವರು ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ, ನಿವೃತ್ತ ಜೀವನ ಸುಖ, ಆರೋಗ್ಯ ಮತ್ತು ನೆಮ್ಮದಿಯಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಗೋಪಿಕಾ ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]