ಹೊಸನಗರ

ಸೇವಾ ಸಂಕಲ್ಪ ಅಭಿಯಾನ: ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ‘ಅಂಗನವಾಡಿ ಉತ್ಸವ’

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ವಿವಿಧ ವಾರ್ಡ್‌ಗಳಲ್ಲಿ ಮಹಾಶಕ್ತಿ ಕೇಂದ್ರದ ವತಿಯಿಂದ 'ಅಂಗನವಾಡಿ ಉತ್ಸವ' ಕಾರ್ಯಕ್ರಮವನ್ನು ಅತ್ಯಂತ ಸಡಗರದಿಂದ ಆಯೋಜಿಸಲಾಗಿತ್ತು.

ಸೇವಾ ಸಂಕಲ್ಪ ಅಭಿಯಾನ Seva Sankalpa

ರಿಪ್ಪನ್‌ಪೇಟೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಭಾಗವಾಗಿ, ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ವಿವಿಧ ವಾರ್ಡ್‌ಗಳಲ್ಲಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಅಂಗನವಾಡಿ ಉತ್ಸವ’ ಕಾರ್ಯಕ್ರಮವನ್ನು ಅತ್ಯಂತ ಸಡಗರದಿಂದ ಆಯೋಜಿಸಲಾಗಿತ್ತು. ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಪ್ರಧಾನಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

WhatsApp Group Join Now
Telegram Group Join Now
Instagram Group Join Now

ಈ ಅಭಿಯಾನದ ಅಂಗವಾಗಿ ಕೆರೆಹಳ್ಳಿ ಹೋಬಳಿಯ ಮಹಾಶಕ್ತಿ ಕೇಂದ್ರದ ವ್ಯಾಪ್ತಿಗೆ ಬರುವ ಬಸವಾಪುರ ಮತ್ತು ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮೀಣ ಮಟ್ಟದಲ್ಲಿ ಮಕ್ಕಳ ಪೌಷ್ಟಿಕಾಂಶ ಮತ್ತು ಆರಂಭಿಕ ಶಿಕ್ಷಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ಈ ಸಂದರ್ಭದಲ್ಲಿ ಅವರಿಗೆ ವಿಶೇಷ ಗೌರವ ಸಮರ್ಪಣೆ ಮಾಡಿ ಸನ್ಮಾನಿಸಲಾಯಿತು. ನಂತರ ಕಾರ್ಯಕ್ರಮದಲ್ಲಿ ಹಾಜರಿದ್ದ ಮುಖಂಡರು, ಅಂಗನವಾಡಿ ಕೇಂದ್ರದ ಮಕ್ಕಳೊಂದಿಗೆ ಬೆರೆತು ಅವರಿಗೆ ಸಿಹಿ ತಿನಿಸುಗಳನ್ನು ವಿತರಿಸಿ ಸಂಭ್ರಮಿಸಿದರು.

ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಪ್ರಮುಖರಾದ ಪದ್ಮಾ ಸುರೇಶ್, ನಾಗರತ್ನ ದೇವರಾಜ್, ರೇಖಾ ರವಿರಾವ್, ಸೀತಮ್ಮ, ಗೀತಾ ಕರಿಬಸಪ್ಪ, ಶಾಂತಾ ರವಿ, ಸುಬ್ರಹ್ಮಣ್ಯ ಅರಸಾಳು, ಗಣೇಶ್ ಅರಸಾಳು, ಪಿ. ಸುಧೀರ್ ಸೇರಿದಂತೆ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!