Accident

ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರಿಗೆ ಗಾಯ !

ಶಿಕಾರಿಪುರ : ಪಟ್ಟಣದಲ್ಲಿ ಸೋಮವಾರ ಖಾಸಗಿ ಬಸ್ ಪಲ್ಟಿಯಾಗಿ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಇವರಲ್ಲಿ 15 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಯಾಳುಗಳೆಲ್ಲರನ್ನೂ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ಇಂದು ಬೆಳಗ್ಗೆ ಖಾಸಗಿ ಬಸ್ ಶಿವಮೊಗ್ಗದಿಂದ ಶಿಕಾರಿಪುರ ಪಟ್ಟಣವನ್ನು ಪ್ರವೇಶಿಸಿದಾಗ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕ, ತನ್ನ ಮುಂದೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಡಕ್ಕೆ ತಿರುಗಿಸಿದ್ದಾನೆ. ಹೀಗಾಗಿ ಬಸ್ ಡಿವೈಡರ್ ದಾಟಿ ಪಲ್ಟಿಯಾಗಿದ್ದು ಬಸ್‌ನಲ್ಲಿದ್ದ 17ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಾಗಿವೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ತಕ್ಷಣವೇ ಗಾಯಾಳುಗಳನ್ನು ಶಿಕಾರಿಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ, ಕೆಲವರಿಗೆ ಕೈ-ಕಾಲು ಮುರಿತವಾದ ಕಾರಣಕ್ಕೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ‌ ರವಾನೆ ಮಾಡಲಾಗಿದೆ‌. ಅಲ್ಲಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.

ಘಟನೆಯ ದೃಶ್ಯ ಸುತ್ತಮುತ್ತಲ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]