MUDIGERE ; ಚಾಲಕ ನಿಯಂತ್ರಣ ತಪ್ಪಿ ಜೀಪೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನ ಕೋಗಿಲೆ ಗ್ರಾಮದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಜೀಪಿನಲ್ಲಿದ್ದ 3 ರಿಂದ 4 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳಿಗೆ ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು.
ಟಿಟಿ ವಾಹನ ಪಲ್ಟಿ, ಗಾಯ !
MUDIGERE ; ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವೊಂದು ರಸ್ತೆಯ ಮಧ್ಯೆಯೇ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಸೋಮವಾರ ನಡೆದಿದೆ.
ಟಿಟಿ ವಾಹನದಲ್ಲಿ 15 ಜನ ಪ್ರಯಾಣಿಕರಿದ್ದರು ಎನ್ನಲಾಗಿದ್ದು 9 ಜನರಿಗೆ ಗಾಯಗಳಾಗಿವೆ, ಗಾಯಾಳುಗಳನ್ನು ಕಳಸ, ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರಿನಿಂದ ಹೊರನಾಡಿಗೆ ಬಂದಿದ್ದ ಟಿಟಿ ವಾಹನ ಅನ್ನಪೂರ್ಣೇಶ್ವರಿ ದರ್ಶನ ಮುಗಿಸಿ ವಾಪಸು ಹೊರಟಿತ್ತು ಈ ವೇಳೆ ವಾಹನ ಸಂಪಿಗೆಖಾನ್ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕಳಸ ಭಾಗದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಚಾಲಕನ ನಿಯಂತ್ರಣ ತಪ್ಪಲು ಇದು ಕೂಡ ಕಾರಣ ಎನ್ನಲಾಗಿದೆ.
ಘಟನೆ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.