ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, ₹ 75 ಸಾವಿರ ದಂಡ !

Written by Mahesha Hindlemane

Published on:

ಶಿವಮೊಗ್ಗ ; 17 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ಜೊತೆಗೆ ₹ 75 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ.

WhatsApp Group Join Now
Telegram Group Join Now
Instagram Group Join Now

ಪ್ರಕರಣದ ವಿವರ ;

📢 Stay Updated! Join our WhatsApp Channel Now →

2022ರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ವ್ಯಕ್ತಿಯೊಬ್ಬ 17 ವರ್ಷದ ಅಪ್ರಾಪ್ತೆ ಲೈಂಗಿಕ ದೌರ್ಜನ್ಯವನ್ನೆಸಗಿದ್ದಾನೆಂದು ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಮಾಳೂರು ಪೊಲೀಸ್ ಠಾಣೆಯಲ್ಲಿ ಕಲಂ 376(2)(ಎನ್),‌ 366, 363 ಐಪಿಸಿ ಕಾಯ್ದೆ ಹಾಗೂ ಕಲಂ 06 ಪೋಕ್ಸೋ ಕಾಯ್ದೆ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ತನಿಖಾಧಿಕಾರಿ ಮಾಳೂರು ವೃತ್ತದ ಸಿಪಿಐ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದಂತ ಶ್ರೀಧರ್ ಹೆಚ್. ಆರ್ ವಾದ ಮಂಡಿಸಿದ್ದು. ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1 ಪ್ರಕರಣದ ವಿಚಾರಣೆ ನಡೆಸಿ, ಆರೋಪಿಯ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ₹ 75 ಸಾವಿರ ದಂಡ ವಿಧಿಸಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಶಿವಮೊಗ್ಗದಿಂದ ಸಂತ್ರಸ್ತ್ರ ಬಾಲಕಿಗೆ ₹ 4 ಲಕ್ಷ ಪರಿಹಾರವನ್ನು ನೀಡುವಂತೆ ಆದೇಶಿಸಿದ್ದಾರೆ.

Leave a Comment