ಲೈಗಿಂಕ ಕಿರುಕುಳ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸಿ ; ಶಶಿಕಲಾ

Written by Mahesha Hindlemane

Published on:

ಹೊಸನಗರ ; ಹೆಣ್ಣು ಮಕ್ಕಳ ಮತ್ತು ಮಹಿಳೆಯರ ರಕ್ಷಣೆ ಹಾಗೂ ಲೈಗಿಂಕ ಕಿರುಕುಳ ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೇ ಕಠಿಣ ಶಿಕ್ಷೆ ವಿಧಿಸಬೇಕೆಂದು ಸ್ತ್ರೀ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶಶಿಕಲಾ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ತಾಲ್ಲೂಕಿನ ಸ್ತ್ರೀ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊಸನಗರದ ತಹಸೀಲ್ದಾರ್ ಭರತ್‌ರಾಜ್‌ರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ಕಳೆದ 13 ವರ್ಷಗಳಿಂದ ಮಹಿಳೆಯರ, ಅವರ ಕುಟುಂಬ ಹಾಗೂ ಸಮುದಾಯದ ಅಭಿವೃದ್ಧಿಗಾಗಿ ಮತ್ತು ಸಮುದಾಯದಲ್ಲಿನ ಸಮಸ್ಯೆ ಮತ್ತು ದೌರ್ಜನ್ಯಗಳನ್ನು ಖಂಡಿಸಿ ಶೋಷಿಸಿ, ಬಡ-ಬಗ್ಗರ, ದೀನ ದಲಿತರ, ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಮಹಿಳೆಯರ ಸಾಮರ್ಥ್ಯ ಅಭಿವೃದ್ಧಿಗಾಗಿ ಹಾಗೂ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ಒಕ್ಕೂಟ ಶ್ರಮಿಸುತ್ತಿದೆ 2026ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊಸನಗರ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ಒಕ್ಕೂಟಗಳ ಪ್ರತಿನಿಧಿಗಳು, ಸ್ವ-ಸಹಾಯ ಸಂಘಗಳ ಎಲ್ಲಾ ಮಹಿಳೆಯರು, ಸಾರ್ವಜನಿಕರು ಹಾಗೂ ಇತರೆ ಸಂಘಟನೆಯ ಸದಸ್ಯರು ತಮ್ಮಲ್ಲಿ ಒಕ್ಕೊರಲಿನಿಂದ ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ, ಹಿಂಸಾಚಾರ, ಅತ್ಯಾಚಾರ, ಲೈಂಗಿಕ ಕಿರುಕುಳ, ಹತ್ಯೆ ಮುಂತಾದ ಕಂಡು ಕೇಳರಿಯದ ಭೀಭತ್ಸ್ಯ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು ಇದಕ್ಕೆ ಅಂತಿಮ ಹಾಡುವ ಲಕ್ಷಣಗಳೇ ಕಾಣುತ್ತಿಲ್ಲ. ಅದರಂತೆ ನಮ್ಮ ರಾಜ್ಯದಲ್ಲೂ ಸಾವಿರಾರು ಅತ್ಯಾಚಾರ ಪ್ರಕರಣ ದಾಖಲೆಗೊಂಡು ಪೋಲೀಸ್ ಇಲಾಖೆಯ ಪ್ರಕಾರ ನೂರಾರು ಅತ್ಯಾಚಾರ ಪ್ರಕರಣ ವಿಚಾರಣಾ ಹಂತದಲ್ಲಿದೆ. ಹಲವು ಪ್ರಕರಣಗಳು ವಿಚಾರಣೆ ಆಗಬೇಕಿದೆ. ಸಾವಿರಾರು ಪೋಕ್ಸೋ ಪ್ರಕರಣಗಳು ದಾಖಲಾಗಿ ವಿಚಾರಣೆ ಹಂತದಲ್ಲಿದೆ. ಸಾವಿರಾರು ಲೈಂಗಿಕ ಪ್ರಕರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲಾಗಿವೆ. ಇಂತಹ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಮಹಿಳೆಯರು ಮತ್ತು ಮಕ್ಕಳು ಉಸಿರುಗಟ್ಟುವ ವಾತಾವರಣದಲ್ಲಿ ಜೀವಿಸುವ ಸಂದರ್ಭ ನಿರ್ಮಾಣವಾಗಿದೆ.

ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಮೇಲಿನ ಎಲ್ಲಾ ದೌರ್ಜನ್ಯ, ಹಿಂಸೆ, ಅತ್ಯಾಚಾರ, ಹತ್ಯೆಯಂತಹ ಪ್ರಕರಣ ಶಾಶ್ವತವಾಗಿ ನಿಲ್ಲಬೇಕಾದರೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ, ಶಾಶ್ವತ ಜಾಮೀನು ನಿರಾಕರಣೆ, ಜೀವಾವಧಿ ಶಿಕ್ಷೆ ಅಥವಾ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದು ಮಹಿಳೆಯರು ಮತ್ತು ಮಕ್ಕಳಿಗೆ ಸಮಾಜದಲ್ಲಿ ಮುಕ್ತವಾಗಿ ಜೀವನ ನಡೆಸಲು ಅವಕಾಶ ಕಲ್ಪಿಸಬೇಕಾಗಿದೆ ಅದಕ್ಕಾಗಿ ನಾವು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡುತ್ತಿದ್ದು ತಕ್ಷಣ ಜಾರಿಗೆ ಬರುವಂತೆ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತನ್ನಿ ಎಂದರು.

ತಹಸೀಲ್ದಾರ್ ಭರತ್‌ರಾಜ್‌ರಿಗೆ ಮನವಿ ಪತ್ರ ನೀಡುವ ಸಂದರ್ಭದಲ್ಲಿ ಎಂ ಗುಡ್ಡೆಕೊಪ್ಪ ಗಾಮದ ಒಕ್ಕೂಟದ ಅಧ್ಯಕ್ಷೆ ಶಶಿಕಲಾ, ಕೋಡೂರು ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ, ಕಬಳೆ ನಗರ ಒಕ್ಕೂಟದ ಅಧ್ಯಕ್ಷೆ ಸವಿತಾ, ಸೊನಲೆ ಒಕ್ಕೂಟದ ಅಧ್ಯಕ್ಷೆ ನಾಗಮಣಿ, ರಾಮಚಂದ್ರಪುರ ಒಕ್ಕೂಟದ ಅಧ್ಯಕ್ಷೆ ಸುಮಲತಾ, ಪಟಗುಪ್ಪ, ಜೇನಿ ಒಕ್ಕೂಟದ ಅಧ್ಯಕ್ಷೆ ವೀಣಾ ಹಾಗೂ ನೂರಾರು ಒಕ್ಕೂಟದ ಸದಸ್ಯೆಯರು ಭಾಗವಹಿಸಿದರು.

Leave a Comment