ಶಿವಮೊಗ್ಗ

ಸಾರ್ವಜನಿಕರನ್ನು ಅಲೆದಾಡಿಸಬೇಡಿ, ತಾಳ್ಮೆಯಿಂದ ಸೇವೆ ನೀಡಿ: ಶಾಸಕಿ ಶಾರದಾ ಪೂರ್ಯಾ ನಾಯ್ಕ್

ಹಾರನಹಳ್ಳಿಯಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಶಾಸಕಿ ಶಾರದಾ ಪೂರ್ಯಾ ನಾಯ್ಕ್, ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸದೆ ತಾಳ್ಮೆಯಿಂದ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆ ಕೊರತೆ ಹಿನ್ನೆಲೆ ಕೆರೆಗಳನ್ನು ತ್ವರಿತವಾಗಿ ತುಂಬಿಸಲು ಕ್ರಮ ಕೈಗೊಳ್ಳುವಂತೆ ನೀರಾವರಿ ಇಲಾಖೆಗೆ ಸಲಹೆ ನೀಡಿದರು.

ಸಾರ್ವಜನಿಕರನ್ನು ಅಲೆದಾಡಿಸಬೇಡಿ, ತಾಳ್ಮೆಯಿಂದ ಸೇವೆ ನೀಡಿ: ಶಾಸಕಿ ಶಾರದಾ ಪೂರ್ಯಾ ನಾಯ್ಕ್ – ph sharada purya naik

ಶಿವಮೊಗ್ಗ: ಸಮಸ್ಯೆಗಳಿಗೆ ಪರಿಹಾರ ಹುಡುಕಿಕೊಂಡು ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸದೆ, ತಾಳ್ಮೆಯಿಂದ ಅವರ ಮನವಿಗಳನ್ನು ಆಲಿಸಿ ಸಮಯಕ್ಕೆ ಸರಿಯಾಗಿ ಕೆಲಸ ಮಾಡಿಕೊಡಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾ ನಾಯ್ಕ್ ಅಧಿಕಾರಿಗಳಿಗೆ ಸೂಚಿಸಿದರು.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ತಾಲೂಕಿನ ಹಾರನಹಳ್ಳಿಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರೊಂದಿಗೆ ಅಧಿಕಾರದ ಧೋರಣೆಯಲ್ಲಿ ವರ್ತಿಸುವ ಬದಲು, ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಮಾನವೀಯವಾಗಿ ಸ್ಪಂದಿಸಬೇಕು. ಜನರಿಗೆ ತೃಪ್ತಿಕರ ಸೇವೆ ನೀಡುವುದರಿಂದ ಅಧಿಕಾರಿಗಳಿಗೂ ಸೇವೆಯ ಸಾರ್ಥಕತೆ ದೊರೆಯುತ್ತದೆ ಎಂದು ಹೇಳಿದರು.

ಪ್ರಜಾಸೇವಾ ಆಂದೋಲನದ ಉದ್ದೇಶವೇ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಉಂಟಾಗಬಾರದು ಎಂದು ಅವರು ಸೂಚಿಸಿದರು.

ಹಾರನಹಳ್ಳಿ ಭಾಗದಲ್ಲಿ ಮಳೆ ಕೊರತೆ ಬಗ್ಗೆ ಆತಂಕ

ಹಾರನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಹಲವು ಕೆರೆ, ಕಟ್ಟೆ ಮತ್ತು ಕಾಲುವೆಗಳಲ್ಲಿ ನೀರಿನ ಕೊರತೆ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಶಾಸಕಿ ಆತಂಕ ವ್ಯಕ್ತಪಡಿಸಿದರು.

ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ತ್ವರಿತಗೊಳಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮಳೆ ಮಾಪನ ಕೇಂದ್ರಗಳ ನಿರ್ವಹಣೆಯಲ್ಲೂ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ರೈತರಿಗೆ ಬೆಳೆ ವಿಮೆ ನೀಡುವ ಸಂದರ್ಭದಲ್ಲಿ ಕೇವಲ ಮಳೆಮಾಪನ ಕೇಂದ್ರದ ವರದಿಯನ್ನೇ ಆಧಾರವಾಗಿಸದೆ, ಸ್ಥಳೀಯ ವಾಸ್ತವ ಪರಿಸ್ಥಿತಿಯನ್ನೂ ಪರಿಶೀಲಿಸಬೇಕು ಎಂದು ಹೇಳಿದರು.

ಸಾರ್ವಜನಿಕರಿಂದ ಹಲವು ಅಹವಾಲು

ಸಭೆಯಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ, ಮಾಸಾಶನ, ಶಾಲೆಗೆ ಅಡುಗೆ ಕೋಣೆ, ರೈಲ್ವೆ ನಿಲ್ದಾಣದಲ್ಲಿ ಬೆಳಕಿನ ವ್ಯವಸ್ಥೆ, ಬಾಕ್ಸ್ ಚರಂಡಿ ಹಾಗೂ ಸ್ಮಶಾನ ಭೂಮಿ ಮಂಜೂರಾತಿ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಉಪವಿಭಾಗಾಧಿಕಾರಿ ಡಾ. ಮೈತ್ರಿ, ತಹಸೀಲ್ದಾರ್ ರಾಜೀವ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650