ಬಾಳೆಹೊನ್ನೂರು ; ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರ 34ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಬೀದರ ಜಿಲ್ಲೆ ಬಸವಕಲ್ಯಾಣದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ಮಾನವ ಧರ್ಮ ಮಂಟಪದಲ್ಲಿ ಸಪ್ಟಂಬರ್ 22ರಿಂದ ಅಕ್ಟೋಬರ್ 2ರ ವರೆಗೆ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಜರುಗುವುದೆಂದು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಸೆ. 22ರಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ಧುರೀಣರಾದ ಬಿ.ಎಸ್.ಯಡಿಯೂರಪ್ಪ ಸಮಾರಂಭವನ್ನು ಉದ್ಘಾಟಿಸುವರು. ಅರಣ್ಯ ಪರಿಸರ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು Rkha ಬಸವಕಲ್ಯಾಣ ಶರನ್ನವರಾತ್ರಿ ದಸರಾ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಈಶ್ವರ ಖಂಡ್ರೆ ಶ್ರೀ ರಂಭಾಪುರಿ ಜಗದ್ಗುರುಗಳ ಭಾವಚಿತ್ರ ಬಿಡುಗಡೆ ಮಾಡುವರು. ಸಮಿತಿಯ ಗೌರವಾಧ್ಯಕ್ಷರಾದ ಹಾರಕೂಡ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ನೇತೃತ್ವ ವಹಿಸಲಿದ್ದು ಅ.ಭಾ.ವೀ.ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷರಾದ ಸಿಂದಗಿಯ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಸಮ್ಮುಖ ವಹಿಸುವರು. ಪೌರಾಡಳಿತ-ಹಜ್ ಖಾತೆ ಸಚಿವಾಲಯ ಐ ರಹೀಮಖಾನ, ಹುಮನಾಬಾದ ಶಾಸಕ ಡಾ.ಸಿದ್ಧಲಿಮಗ ಪಾಟೀಲ, ಮಾಜಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ, ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ್, ಸಮಿತಿಯ ಕಾರ್ಯಾಧ್ಯಕ್ಷ- ಶಾಸಕ ಶರಣು ಬಿ.ಸಲಗರ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳುವರು.

ಸೆ.23ರಂದು ಮುಖ್ಯ ಅತಿಥಿಗಳಾಗಿ ಸಚಿವರಾದ ಪ್ರಿಯಾಂಕ ಖರ್ಗೆ, ಸಂಸದರಾದ ಸಾಗರ ಖಂಡ್ರೆ, ಶಿವಾಜಿ ಬಂಡೆಪ್ಪ ಕಾಳಗೆ, ಕೆಕೆಆರ್ಡಿಬಿ ಅಧ್ಯಕ್ಷ ಅಜಯಸಿಂಗ್ ಧರ್ಮಸಿಂಗ್, ಶಾಸಕ ಸಿದ್ಧಲಿಂಗ ಪಾಟೀಲ, ಡಾ|| ಚಂದ್ರಶೇಖರ ಪಾಟೀಲ, ಬಸವರಾಜ ಪಾಟೀಲ ಅಟ್ಟೂರು ಮೊದಲಾದವರು ಭಾಗವಹಿಸುವರು.

ಸೆ.24ರಂದು ಕೊಲ್ಲಿಪಾಕಿ ಕ್ಷೇತ್ರ ದರ್ಶನ ಕೃತಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಡುಗಡೆಗೊಳಿಸುವರು. ಶಾಸಕರಾದ ಡಾ.ಅವಿನಾಶ ಜಾಧವ, ಬಸವರಾಜ ಮತ್ತಿಮೂಡ, ವಿ.ಪ.ಮಾಜಿ ಸಭಾಪತಿ ರಘುನಾಥ ಮಲ್ಕಾಪುರೆ ಪ್ರಕಾಶ ಖಂಡ್ರೆ, ದತ್ತಾತ್ರೆಯ ಪಾಟೀಲ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುವರು.

ಸೆ.25ರಂದು ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಬಿಜೆಪಿ ರಾಜ್ಯಾಧ್ಯಕ್ಷ-ಶಾಸಕ ಬಿ.ವೈ.ವಿಜಯೇಂದ್ರ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಅಭಿಮನ್ಯು ಪವಾರ, ವಿ.ಪ.ಸದಸ್ಯ ಭೀಮರಾವ ಪಾಟೀಲ, ಮಾಜಿ ಶಾಸಕರಾದ ರಾಜೇಂದ್ರ ವರ್ಮಾ, ಗುಂಡಪ್ಪ ವಕೀಲ ಭಾಗವಹಿಸುವರು.

ಸೆ. 26ರಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಮಾಜಿ ಮುಖ್ಯ ಮಂತ್ರಿ-ಸಂಸದ ಬಸವರಾಜ ಬೊಮ್ಮಾಯಿ, ಶಾಸಕರಾದ ವಿಜಯಾನಂದ ಕಾಶಪ್ಪನವರ, ಬಿ.ಆರ್.ಪಾಟೀಲ, ಜಿ.ಎಸ್.ಪಾಟೀಲ, ಸಿ.ಸಿ.ಪಾಟೀಲ, ಮಾಜಿ ಸಂಸದ ಬಸವರಾಜ ಪಾಟೀಲ, ಅಶೋಕ ಖೇಣಿ ಭಾಗವಹಿಸುವರು.

ಸೆ. 27ರಂದು ರಂಭಾಪುರಿ ಬೆಳಗು ಪತ್ರಿಕೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಬಿಡುಗಡೆ ಮಾಡುವರು. ಮಾಜಿ ಮುಖ್ಯಮಂತ್ರಿ-ಸಂಸದ ಜಗದೀಶ ಶೆಟ್ಟರ್, ಅ.ಭಾ.ವೀ.ಲಿಂ.ಮಹಾಸಭಾ ಅಧ್ಯಕ್ಷ ಶಂಕರ ಬಿದರಿ, ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ, ಬಂಡೆಪ್ಪಾ ಖಾಶಂಪುರ, ರಾಜಕುಮಾರ ತೆಲ್ಕೂರ ಪಾಲ್ಗೊಳ್ಳುವರು.

ಸೆ.28ರಂದು ಕೇಂದ್ರ ಸಚಿವ ವಿ.ಸೋಮಣ್ಣ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ, ಸಚಿವ ಡಾ|| ಶರಣುಪ್ರಕಾಶ ಪಾಟೀಲ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಂ.ವಾಯ್.ಪಾಟೀಲ, ಸಂಭಾಜಿರಾವ ಪಾಟೀಲ, ಜಗದೀಶ ಗುಡಗುಂಟಿ ಭಾಗವಹಿಸವರು.

ಸೆ.29ರಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕರಾದ ಲಕ್ಷ್ಮಣ ಸವದಿ, ಹರೀಶ ಪೂಂಜ್ಯಾ, ರಾಜೇಶ ನಾಯಕ, ಮಾಜಿ ಸಂಸದ ಡಾ.ಉಮೇಶ ಜಾಧವ ಪಾಲ್ಗೊಳ್ಳುವರು.

ಸೆ.30ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಮುರಗೇಶ ನಿರಾಣಿ, ಸುಭಾಷ ಕಲ್ಲೂರ, ಸುಭಾಷ ಗುತ್ತೆದಾರ, ವಿಜಯಸಿಂಗ್ ಭಾಗವಹಿಸುವರು.

ಅ.1 ರಂದು ಮಾಜಿ ಕೇಂದ್ರ ಸಚಿವ ಶಿವರಾಜ ಪಾಟೀಲ ಚಾಕೂರಕರ, ರಾಜ್ಯ ಸಚಿವ ಭೋಸರಾಜ, ಶಾಸಕ ಶರಣಗೌಡ ಕಂದಕೂರ, ಭಾಜಪ ಮಾಜಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಮೊದಲಾದವರು ಪಾಲ್ಗೊಳ್ಳುವರು.

ಉಪನ್ಯಾಸ:
ಬೆಳಗುಂಪಾ ಅಭಿನವ ಪರ್ವತೇಶ್ವರ ಶಿವಾಚಾರ್ಯರು, ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯರು, ಎಮ್ಮಿಗನೂರಿನ ವಾಮದೇವ ಮಹಂತ ಶಿವಾಚಾರ್ಯರು, ಅಮ್ಮಿನಭಾವಿ ಅಭಿನವ ಶಾಂತಲಿಂಗ ಶಿವಾಚಾರ್ಯರು, ಡಾ. ಜಯಶ್ರೀ ಮಲ್ಲಿಕಾರ್ಜುನ ಹೊಸಮನಿ, ಚಂದ್ರಶೇಖರ ನಾರಣಾಪುರ, ಡಾ.ಮೀನಾಕ್ಷಿ ಖಂಡಿಮಠ, ಡಾ.ಎ.ಸಿ. ವಾಲಿ, ಡಾ.ಪ್ರೇಮಾ ಸಿದ್ಧರಾಜು, ಮಳಖೇಡದ ಹಜರತ್ ಸೈಯದ ಶಹಾ ಮುಸ್ತಫಾ ಖಾದರಿ ಇವರಿಂದ ವಿವಿಧ ವಿಷಯಗಳ ಕುರಿತು ಉಪನ್ಯಾಸ ನಡೆಯುವುದು.

ಪ್ರಶಸ್ತಿ:
ಈ ವರ್ಷದ ರಂಭಾಪುರಿ ಯುವಸಿರಿ ಪ್ರಶಸ್ತಿಯನ್ನು ವಿಶ್ವಜಿತ ತಾತೇರಾವ ಢವಳೆ (ಲಾಡವಂತಿ), ಸಾಹಿತ್ಯ ಸಿರಿ ಪ್ರಶಸ್ತಿಯನ್ನು ಕಲಬುರ್ಗಿಯ ಅಮರಾವತಿ ಎಸ್.ಹಿರೇಮಠ, ಸಾಧನ ಸಿರಿ ಪ್ರಶಸ್ತಿಯನ್ನು ಡಾ,ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಗವಿಮಠ ತ್ರಿಪುರಾಂತಕ, ವೀರಶೈವ ಸಿರಿ ಪ್ರಶಸ್ತಿಯನ್ನು ತ್ರಿಪುರಾಂತಕದ ಶರಣಪ್ಪ ಬಿರಾದಾರ ಹಾಗೂ ಶಿವಾಚಾರ್ಯ ರತ್ನ ಪ್ರಶಸ್ತಿಯನ್ನು ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯರಿಗೆ, ಪಡಸಾವಳಿ ಹಿರೇಮಠದ ಶಂಭುಲಿಂಗ ಶಿವಾಚಾರ್ಯರಿಗೆ ವೀರಶೈವ ತತ್ವ ಪ್ರಬೋಧಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಸಮಾರಂಭದಲ್ಲಿ ಹಲವಾರು ಮಹತ್ವದ ಕೃತಿಗಳು ಬಿಡುಗಡೆಗೊಳ್ಳುವವು.

ಇಷ್ಟಲಿಂಗ ಮಹಾಪೂಜಾ:
ಬಸವಕಲ್ಯಾಣದ ಬಿ.ಕೆ.ಡಿ.ಬಿ.ಕಲ್ಯಾಣ ಮಂಟಪದಲ್ಲಿ ಪ್ರತಿ ದಿನ ಬೆಳಿಗ್ಗೆ ಲೋಕ ಕಲ್ಯಾಣಾರ್ಥವಾಗಿ ಶ್ರೀರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜಾ ನಡೆಸುವರು. ವಿಜಯದಶಮಿಯಂದು ಇಷ್ಟಲಿಂಗ ಮಹಾಪೂಜೆಗೆ ಸ್ವತಃ ಶ್ರೀ ರಂಭಾಪುರಿ ಜಗದ್ಗುರುಗಳು ಅಗ್ರೋದಕ ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು.
ಅ. 2 ವಿಜಯದಶಮಿಯಂದು ಶ್ರೀ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿ ಅರಿವಿನ ಮನೆ ಆವರಣದಲ್ಲಿ ಶಮೀಪೂಜೆ ಸಲ್ಲಿಸಿ ನಂತರ ಮಾನವ ಧರ್ಮ ಮಂಟಪಕ್ಕೆ ಆಗಮಿಸಿ ಶಾಂತಿ ಸಂದೇಶ ಅನುಗ್ರಹಿಸುವರು.

ಸ್ವಾಗತ ಸಮಿತಿಯ ಅಧ್ಯಕ್ಷ-ಸಚಿವ ಈಶ್ವರ ಖಂಡ್ರೆ, ಕಾರ್ಯಾಧ್ಯಕ್ಷ ಶಾಸಕ ಶರಣು ಸಲಗರ, ಗೌರವ ಉಪಾಧ್ಯಕ್ಷ ರಾಜಶೇಖರ ಪಾಟೀಲ, ಗೌರವಾಧ್ಯಕ್ಷ ಹಾರಕೂಡ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿಗಳು, ಮಾರ್ಗದರ್ಶಕರಾದ ಮೆಹಕರ-ತಡೋಳಾ ಹಿರೇಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು, ತ್ರಿಪುರಾಂತಕ ಗವಿಮಠದ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಹಾಗೂ ದಸರಾ ಮಹೋತ್ಸವ ಸಮಿತಿಯ ಎಲ್ಲ ಪದಾಧಿಕಾರಿಗಳು ಪಾಲ್ಗೊಳ್ಳುವರು.

ಸೆ. 27ರಂದು ಕೃಷಿ ಇಲಾಖೆಯ ಸಹಕಾರದೊಂದಿಗೆ ಕೃಷಿ ಮೇಳ ನಡೆಯುವುದು. ಸೆ. 22ರಿಂದ ಅಕ್ಟೋಬರ್ 1ರ ವರೆಗೆ ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆ ಮಹಿಳಾ ಘಟಕ ಬಸವಕಲ್ಯಾಣ ಇವರಿಂದ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯುವುದು. ಸಮಸ್ತ ಭಕ್ತರು ಪಾಲ್ಗೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.


ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.