ಕಡೂರು ; ಕಾಫಿನಾಡಿನ ಹಲವೆಡೆ ಇಂದು ಮಧ್ಯಾಹ್ನ ಗುಡುಗು ಸಿಡಿಲಬ್ಬರಿಂದ ಕೂಡಿದ ಧಾರಾಕಾರ ಮಳೆಯಾಗಿದ್ದು ಸಿಡಿಲು ಬಡಿದ ಪರಿಣಾಮ ಕುರಿಗಾಹಿಯೋರ್ವ ಮೃತಪಟ್ಟ ಘಟನೆ ಕಡೂರು ತಾಲೂಕಿನ ಗೆದ್ಲೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಲೋಕೇಶಪ್ಪ (48) ಎಂಬುವರು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಘಟನೆ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.