ಶಿಕಾರಿಪುರ

ಗೋ ರಕ್ಷಕರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನೆ: ಕಠಿಣ ಕ್ರಮಕ್ಕೆ ಬಿ.ವೈ. ರಾಘವೇಂದ್ರ ಆಗ್ರಹ

ಗೋ ರಕ್ಷಕರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನೆ: ಕಠಿಣ ಕ್ರಮಕ್ಕೆ ಬಿ.ವೈ. ರಾಘವೇಂದ್ರ ಆಗ್ರಹ – shikaripuar

ಶಿಕಾರಿಪುರ: ಗೋ ಕಳ್ಳತನ, ಗೋ ಹತ್ಯೆ ಹಾಗೂ ಗೋ ರಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಶಿಕಾರಿಪುರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

WhatsApp Group Join Now
Telegram Group Join Now
Instagram Group Join Now

ಪ್ರತಿಭಟನಾ ಮೆರವಣಿಗೆಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಗೋ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಗೋ ರಕ್ಷಕರ ಮೇಲೆ ನಡೆದ ಹಲ್ಲೆ ಅತ್ಯಂತ ಖಂಡನೀಯ. ಸಮಾಜದಲ್ಲಿ ಶಾಂತಿ ಕಾಪಾಡುವ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

ಗೋ ಕಳ್ಳತನ ಮತ್ತು ಗೋ ಹತ್ಯೆಯಂತಹ ಪ್ರಕರಣಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯಗಳಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ರಾಘವೇಂದ್ರ ಆಗ್ರಹಿಸಿದರು.

ಶಿಕಾರಿಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಅಕ್ಕಮಹಾದೇವಿ ವೃತ್ತ ತಲುಪಿತು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಗೋ ರಕ್ಷಕರ ಮೇಲಿನ ಹಲ್ಲೆ ಹಾಗೂ ಗೋ ಕಳ್ಳತನ ಪ್ರಕರಣಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯ ವರ್ತಕರು ಹಾಗೂ ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ಸೂಚಿಸಿದರು. ಅಹಿತಕರ ಘಟನೆಗಳು ನಡೆಯದಂತೆ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಗೋ ರಕ್ಷಣೆ ಕೇವಲ ಧಾರ್ಮಿಕ ವಿಷಯವಲ್ಲ, ಗ್ರಾಮೀಣ ಸಮಾಜದ ಭಾವನೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ವಿಷಯವಾಗಿದೆ. ಸರ್ಕಾರ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಘವೇಂದ್ರ ಒತ್ತಾಯಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

error: Content is protected !!