ಹಾವೇರಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ; ಸಿಎಂ ಘೋಷಣೆ

Written by malnadtimes.com

Published on:

SHIVAMOGGA | ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು – ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನಜಾವ 4ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸಾಂತ್ವನ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Group Join Now

‘ಅಪಘಾತದಲ್ಲಿ ಮೃತಪಟ್ಟ ಸುದ್ದಿಕೇಳಿ ಆಘಾತವಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರ ಭರಿಸಲಿದೆ’ ಎಂದು ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Read More:School Holidays |  ಚಿಕ್ಕಮಗಳೂರು ಜಿಲ್ಲೆಯ ಈ ಎರಡು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ

ಡಿಸಿಎಂ ಡಿಕೆಶಿ ಸಂತಾಪ : 

ಅಪಘಾತದಲ್ಲಿ ಸಾವು ನೋವುಗಳುಂಟಾದ ವಿಷಯ ಕೇಳಿ ಡಿಸಿಎಂ ಡಿ ಕೆ ಶಿವಕುಮಾರ್ ಕೂಡ ಸಂತಾಪ ಸೂಚಿಸಿದ್ದಾರೆ.ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗದ ಭದ್ರಾವತಿಯ ಎಮ್ಮೆಹಟ್ಟಿ ಗ್ರಾಮದ 13ಕ್ಕೂ ಹೆಚ್ಚು‌ ಜನರು ಸಾವಿಗೀಡಾದ ಸಂಗತಿಯಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.

ಇನ್ನೂ ಅಪಘಾತದ ನಂತರದ ದೃಶ್ಯವನ್ನು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ‘X’ ನಲ್ಲಿ ಹಂಚಿಕೊಂಡಿದ್ದಾರೆ.

Read More :Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ಗೊತ್ತಾ ?

Leave a Comment