ಶಿವಮೊಗ್ಗ ಸುದ್ದಿ

ಶಿವಮೊಗ್ಗ : ಎಲ್ .ಎಲ್ .ಆರ್ ರಸ್ತೆಯಲ್ಲಿ ಭೀಕರ ಅಪಘಾತ !

Shivamogga :ಬೆಳಗಿನ ಜಾವ ನಗರದ ಎಲ್‌ ಎಲ್‌ ಆರ್‌ ರಸ್ತೆಯಲ್ಲಿ ಬಸ್‌ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೆಂಗಳೂರಿನಿಂದ ಶಿವಮೊಗ್ಗದತ್ತ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಎಲ್‌ ಎಲ್‌ ಆರ್‌ ರಸ್ತೆಗೆ ಪ್ರವೇಶಿಸುವ ಸಂದರ್ಭದಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಢಿಕ್ಕಿ ಹೊಡೆದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎನ್ನುವ ವ್ಯಕ್ತಿಯು ಗಂಭೀರ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಬಸ್‌ ನಲ್ಲಿದ್ದ ಎಂಟು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಅಪಘಾತಕ್ಕೆ ಕಾರಣ ಬಸ್‌ ಚಾಲಕನ ಅತಿವೇಗ ಹಾಗೂ ಅಜಾಗರೂಕ ಚಾಲನೆ ಎಂದು ಪ್ರಯಾಣಿಕರು ಆರೋಪ ಮಾಡಿದ್ದಾರೆ. ಕಿರಿದಾದ ರಸ್ತೆಯಲ್ಲಿ ಸುರಕ್ಷತೆಯನ್ನು ಲೆಕ್ಕಿಸದೇ ಚಾಲನೆ ಮಾಡಿದ ಕಾರಣ ಅಪಘಾತ ಸಂಭವಿಸಿದೆ ಎಂಬುದಾಗಿ ಹೇಳಿದ್ದಾರೆ.

ಘಟನೆ ಪಶ್ಚಿಮ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650