ಶಿವಮೊಗ್ಗ

ಶಿವಮೊಗ್ಗ: 73 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಸೆಂಬರ್ 19 ಕೊನೆಯ ದಿನ

ಶಿವಮೊಗ್ಗ ತಾಲೂಕಿನಲ್ಲಿ 19 ಅಂಗನವಾಡಿ ಕಾರ್ಯಕರ್ತೆ ಹಾಗೂ 54 ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಸ್ಥಳೀಯ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಡಿಸೆಂಬರ್ 19ರೊಳಗೆ ಅರ್ಜಿ ಸಲ್ಲಿಸಬಹುದು.

ಶಿವಮೊಗ್ಗದಲ್ಲಿ 73 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಸೆಂಬರ್ 19 ಕೊನೆಯ ದಿನ – Anganwadi

ಶಿವಮೊಗ್ಗ: ಶಿವಮೊಗ್ಗ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಒಟ್ಟು 73 ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 19ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 19 ಅಂಗನವಾಡಿ ಕಾರ್ಯಕರ್ತೆ ಹಾಗೂ 54 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಗೌರವಧನ ಸೇವಾ ಆಧಾರದ ಮೇಲೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಶಿವಮೊಗ್ಗ ತಾಲೂಕಿನ ಸ್ಥಳೀಯ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ದ್ವಿತೀಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 19ರಿಂದ 35 ವರ್ಷದೊಳಗಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 19ರೊಳಗೆ ಸಲ್ಲಿಸಬೇಕು.

WhatsApp Group Join Now
Telegram Group Join Now
Instagram Group Join Now

ಅರ್ಜಿಗಳನ್ನು ಶಿವಮೊಗ್ಗದ ವಿನೋಬನಗರದಲ್ಲಿರುವ ವೀರ ಸಾವರ್ಕರ್ ವಾಣಿಜ್ಯ ಸಂಕೀರ್ಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ನೇಮಕಾತಿ ಹಾಗೂ ಅರ್ಜಿ ಸಲ್ಲಿಕೆ ಕುರಿತು ಹೆಚ್ಚಿನ ಮಾಹಿತಿಗಾಗಿ 08182-295110 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನವೆಂಬರ್ 26ರಂದು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್