ಶಿವಮೊಗ್ಗ

ಶಿವಮೊಗ್ಗ ಆಟೊ ಕಾಂಪ್ಲೆಕ್ಸ್‌ನಲ್ಲಿ ಬೀದಿ ನಾಯಿ ದಾಳಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ ಆಟೊ ಕಾಂಪ್ಲೆಕ್ಸ್‌ನಲ್ಲಿ ಬೀದಿ ನಾಯಿ ದಾಳಿ: 10ಕ್ಕೂ ಹೆಚ್ಚು ಜನರಿಗೆ ಗಾಯ – dog bite

ಶಿವಮೊಗ್ಗ: ನಗರದ ಆಟೊ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಬೀದಿ ನಾಯಿ ದಿಢೀರ್ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಆಟೊ ಕಾಂಪ್ಲೆಕ್ಸ್‌ನ ಎರಡನೇ ಅಡ್ಡರಸ್ತೆಯಲ್ಲಿ ಅಂಗಡಿ ಮಾಲೀಕರು, ಕಾರ್ಮಿಕರು ಹಾಗೂ ಗ್ರಾಹಕರ ಮೇಲೆ ನಾಯಿ ಏಕಾಏಕಿ ದಾಳಿ ನಡೆಸಿದೆ. ವ್ಯಕ್ತಿಯೊಬ್ಬರ ಮೇಲೆ ಹಿಂದಿನಿಂದ ಬಂದು ನಾಯಿ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.

ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಬಳಿಕ ಆಟೊ ಕಾಂಪ್ಲೆಕ್ಸ್ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಸ್ಥಳೀಯರ ಪ್ರಕಾರ, ಆಟೊ ಕಾಂಪ್ಲೆಕ್ಸ್‌ನ ನಾಲ್ಕೂ ರಸ್ತೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ವಿಶೇಷವಾಗಿ ಸಂಜೆ 7 ಗಂಟೆಯ ನಂತರ ಪ್ರದೇಶದಲ್ಲಿ ಸಂಚರಿಸಲು ಭಯವಾಗುತ್ತಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

ಉಪಟಳ ನೀಡುತ್ತಿರುವ ಬೀದಿ ನಾಯಿಗಳನ್ನು ಶೀಘ್ರವಾಗಿ ಸೆರೆಹಿಡಿದು ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

error: Content is protected !!