SHIVAMOGGA | ಸಿಲಿಂಡರ್‌ಗಳ (Cylinders) ಸ್ಫೋಟದಿಂದ ಬೇಕರಿಯೊಂದು ಧಗಧಗನೆ ಹೊತ್ತಿ ಉರಿದ (Fire) ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ.
ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್ ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು ಕೆಲವೇ ಕ್ಷಣದಲ್ಲಿ ಸಿಲಿಂಡರ್‌ಗಳು ಸ್ಫೋಟಗೊಂಡಿವೆ.
ಈ ಘಟನೆಯಿಂದ ಅಕ್ಕಪಕ್ಕದಲ್ಲಿನ ಅಂಗಡಿಯವರು, ಬೇಕರಿಯಲ್ಲಿದ್ದ ಗ್ರಾಹಕರು ಓಡಿ ಹೋಗಿದ್ದಾರೆ. ಬೇಕರಿ ಮುಂಭಾಗದಲ್ಲಿಯೇ ಪೆಟ್ರೋಲ್ ಬಂಕ್ ಇದ್ದು ಆತಂಕ ಸೃಷ್ಟಿಯಾಗಿತ್ತು.
ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
Read More
PMKSY : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ !
BSNL ನಿಂದ ಅಗ್ಗದ ರಿಚಾರ್ಜ್ ಯೋಜನೆ : ವ್ಯಾಲಿಡಿಟಿ, ಬೆಲೆ ಎಷ್ಟಿದೆ ತಿಳಿಯಿರಿ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.