ಶಿವಮೊಗ್ಗ ಸುದ್ದಿ

ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ, ಪೊಲೀಸರ ತಡೆ

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಯಿತು. ಪೊಲೀಸರು ತಡೆದ ವೇಳೆ ಕಾರ್ಯಕರ್ತೆಯರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ, ಪೊಲೀಸರ ತಡೆ – mt bjp

ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಖಂಡಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೋಪಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತೆಯರು ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ತಡೆದಿದ್ದು, ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

WhatsApp Group Join Now
Telegram Group Join Now
Instagram Group Join Now

ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಬಳಿಕ ಕಾಂಗ್ರೆಸ್ ಕಚೇರಿಯತ್ತ ಸಾಗಲು ಮುಂದಾದರು. ಈ ಹಿನ್ನೆಲೆಯಲ್ಲಿ ಪೊಲೀಸರು ಮಾರ್ಗದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಪೊಲೀಸ್ ವಾಹನಗಳನ್ನು ಅಡ್ಡವಾಗಿ ನಿಲ್ಲಿಸಿ ಪ್ರತಿಭಟನಾಕಾರರನ್ನು ತಡೆಯಲು ಕ್ರಮ ಕೈಗೊಂಡರು.

ಆದರೂ ಕೆಲ ಕಾರ್ಯಕರ್ತೆಯರು ಬ್ಯಾರಿಕೇಡ್‌ಗಳನ್ನು ದಾಟಿ ಮುಂದೆ ಸಾಗಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದು, ಎರಡೂ ಕಡೆಯ ನಡುವೆ ಮಾತಿನ ಚಕಮಕಿ ನಡೆಯಿತು.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕೆಲ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಮುಂದಾದರು. ಮಹಿಳಾ ಕಾರ್ಯಕರ್ತೆಯರನ್ನು ಪೊಲೀಸ್ ವಾಹನಗಳಿಗೆ ಕರೆದೊಯ್ಯುವ ವೇಳೆ ಗದ್ದಲ ಉಂಟಾಯಿತು. ಕೆಲ ಕಾರ್ಯಕರ್ತೆಯರು ಪೊಲೀಸರ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರೆ, ಮಹಿಳಾ ಪೊಲೀಸರು ಅವರನ್ನು ವಾಹನಗಳಿಗೆ ಕರೆದೊಯ್ಯಲು ಹರಸಾಹಸ ಪಟ್ಟರು.

ಬಿಜೆಪಿ ಮುಖಂಡರು–ಪೊಲೀಸರ ನಡುವೆ ಮಾತಿನ ಚಕಮಕಿ

ಪ್ರತಿಭಟನೆಯ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರ್ಯಪ್ಪ ಅವರ ನಡುವೆ ಮಾತಿನ ಚಕಮಕಿ ನಡೆಯಿತು.

ಮಾಜಿ ಉಪಮೇಯರ್ ಸುರೇಖಾ ಮುರುಳೀಧರ್ ಸೇರಿದಂತೆ ಮಹಿಳಾ ಮೋರ್ಚಾ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತೆಯರನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ಗೋಪಿ ವೃತ್ತ ಹಾಗೂ ಸುತ್ತಮುತ್ತ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪೊಲೀಸರ ತಡೆಯಾಟ, ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಪ್ರಕ್ರಿಯೆ ಹಾಗೂ ಮುಖಂಡರ ನಡುವಿನ ಮಾತಿನ ಚಕಮಕಿ ಪ್ರತಿಭಟನೆಯ ಪ್ರಮುಖ ಬೆಳವಣಿಗೆಗಳಾಗಿದ್ದವು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

error: Content is protected !!