ಶಿವಮೊಗ್ಗ ಸುದ್ದಿ

ಶಿವಮೊಗ್ಗ ದಸರಾ ಉದ್ಘಾಟಿಸಿದ ನಟ ಶ್ರೀನಾಥ್; ಪೂರ್ಣ ‘ವಂದೇ ಮಾತರಂ’ ಗಾಯನಕ್ಕೆ ಆಕ್ಷೇಪಿಸಿ ಕಾಂಗ್ರೆಸ್ ನಾಯಕರು ವೇದಿಕೆಯಿಂದ ನಿರ್ಗಮನ

ಶಿವಮೊಗ್ಗ ದಸರಾ–2026 ಉದ್ಘಾಟನಾ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡಿದ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿ ವೇದಿಕೆಯಿಂದ ನಿರ್ಗಮಿಸಿದರು. ಹಿರಿಯ ನಟ ಶ್ರೀನಾಥ್ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ಶಿವಮೊಗ್ಗ ದಸರಾ ಉದ್ಘಾಟಿಸಿದ ನಟ ಶ್ರೀನಾಥ್; ಪೂರ್ಣ ‘ವಂದೇ ಮಾತರಂ’ ಗಾಯನಕ್ಕೆ ಆಕ್ಷೇಪಿಸಿ ಕಾಂಗ್ರೆಸ್ ನಾಯಕರು ವೇದಿಕೆಯಿಂದ ನಿರ್ಗಮನ – Malnad Tim…

ಶಿವಮೊಗ್ಗ: ಶಿವಮೊಗ್ಗ ದಸರಾ–2026 ಉದ್ಘಾಟನಾ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡಿದ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ವೇದಿಕೆಯಿಂದ ನಿರ್ಗಮಿಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ದಸರಾ ಮಹೋತ್ಸವಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀನಾಥ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ದಸರಾ ಉದ್ಘಾಟನಾ ಕಾರ್ಯಕ್ರಮದ ವೇಳೆ ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡಲಾಯಿತು. ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ ಆದೇಶ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಸಿ. ಯೋಗೀಶ್ ನೇತೃತ್ವದಲ್ಲಿ ಸೂಡಾ ಅಧ್ಯಕ್ಷ ಸಿ.ಜಿ. ಮಧುಸೂದನ್, ಜವಳಿ ನಿಗಮ ಅಧ್ಯಕ್ಷ ಕೆ. ಚೇತನ್, ನಾಗರಾಜ್ ಕಂಕಾರಿ, ಹೆಚ್. ಪಾಲಾಕ್ಷಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ವೇದಿಕೆಯಿಂದ ಹೊರನಡೆದರು.

ಇದು ರಾಜ್ಯ ಸರ್ಕಾರದ ಕಾರ್ಯಕ್ರಮವಾಗಿರುವುದರಿಂದ ಸರ್ಕಾರದ ಆದೇಶವನ್ನು ಪಾಲಿಸಬೇಕಿತ್ತು ಎಂದು ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಪೂರ್ಣ ‘ವಂದೇ ಮಾತರಂ’ ಗಾಯನಕ್ಕೆ ಅವಕಾಶ ನೀಡಿದ ಪಾಲಿಕೆ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೆಚ್.ಸಿ. ಯೋಗೀಶ್ ಒತ್ತಾಯಿಸಿದರು.

ಈ ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ‘ವಂದೇ ಮಾತರಂ’ ಗಾಯನದ ವಿಚಾರ ಮತ್ತೊಮ್ಮೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಇದಕ್ಕೂ ಮೊದಲು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿದ್ದಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ಹೊರನಡೆದಿದ್ದರು.

ಇದೀಗ ದಸರಾ ಉದ್ಘಾಟನಾ ವೇದಿಕೆಯಲ್ಲಿ ಪೂರ್ಣ ಗೀತೆ ಹಾಡಿದ ವಿಚಾರಕ್ಕೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿರುವುದು, ‘ವಂದೇ ಮಾತರಂ’ ಗಾಯನದ ಕುರಿತ ರಾಜಕೀಯ ಭಿನ್ನಾಭಿಪ್ರಾಯವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

error: Content is protected !!