ಶಿವಮೊಗ್ಗ ; ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ಅವರನ್ನು ವರ್ಗಾವಣೆಗೊಳಿಸಿ ಡಿ.31ರ ಬುಧವಾರ ಸರ್ಕಾರ ಆದೇಶಿದೆ.
ಡಾ.ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಮಿಷನರ್ ಆಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಇವರು 2024ರ ಫೆ.1 ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ಅವರ ತೆರವಾದ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.

ಅವರು ಪ್ರಸ್ತುತ ಕರ್ನಾಟಕದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಮತ್ತು ಬೆಂಗಳೂರಿನಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





