ಶಿವಮೊಗ್ಗ:ಶಿವಮೊಗ್ಗದ ಬಾಲರಾಜ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಯು.ಪಿ.ಎಸ್ ಘಟಕದಿಂದ ಒಟ್ಟು 24 ಬ್ಯಾಟರಿಗಳು ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿ ಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಘಟನೆಯ ವಿವರ:
ಜುಲೈ 28ರಂದು ಸಂಜೆ 4 ಗಂಟೆ ಸುಮಾರಿಗೆ ನ್ಯಾಯಾಲಯದ ಯು.ಪಿ.ಎಸ್ (UPS) ಕನೆಕ್ಷನ್ ಅಚಾನಕ್ ಸ್ಥಗಿತಗೊಂಡಿತ್ತು. ತಕ್ಷಣವೇ ಸಿಬ್ಬಂದಿ ಯು.ಪಿ.ಎಸ್ ಕೊಠಡಿಗೆ ತೆರಳಿ ಪರಿಶೀಲನೆ ನಡೆಸಿದಾಗ ಅಳವಡಿಸಲಾಗಿದ್ದ 24 ಬ್ಯಾಟರಿಗಳು ಗಾತವಾಗಿ ಕಾಣೆಯಾಗಿದ್ದವು.ಈ ಬ್ಯಾಟರಿಗಳನ್ನು 2019ರಲ್ಲಿ ಅಳವಡಿಸಲಾಗಿತ್ತು, ಮತ್ತು ಎರಡು ತಿಂಗಳ ಹಿಂದೆ ಸರ್ವಿಸ್ ಸಂದರ್ಭದಲ್ಲಿ ಎಲ್ಲ ಬ್ಯಾಟರಿಗಳು ಸ್ಥಳದಲ್ಲೇ ಇದ್ದವು ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ನ್ಯಾಯಾಲಯದಲ್ಲಿ ಈ ರೀತಿಯ ಕಳ್ಳತನ ಸಂಭವಿಸಿದ್ದೇ ಅಧಿಕಾರಿಗಳ ಅಚ್ಚರಿಗೆ ಕಾರಣವಾಗಿದೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.